ETV Bharat / state

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್​ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್​ಸ್ಟೇಬಲ್​

author img

By ETV Bharat Karnataka Team

Published : Oct 21, 2023, 12:32 PM IST

ರಾರಾಜಿನಗರ ಠಾಣೆಯ ಹೆಡ್​ ಕಾನ್​ಸ್ಟೇಬಲ್​​ ಆಂಜನೇಯ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

head constable fell into Lokayuktas trap while accepting bribe
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್ಸ್ಟೇಬಲ್​

ಬೆಂಗಳೂರು: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್​ ಸಲ್ಲಿಸಲು 50 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟು, ಐದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್​ ಹೆಡ್​ ಕಾನ್​ಸ್ಟೇಬಲ್​ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾರಾಜಿನಗರ ಠಾಣೆಯ ಹೆಡ್​ ಕಾನ್​ಸ್ಟೇಬಲ್​​ ಆಂಜನೇಯ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದವರು. ಪ್ರಕರಣದಲ್ಲಿ ಸಬ್​ ಇನ್​ಸ್ಪೆಕ್ಟರ್​ ಮಾರುತಿ ಮತ್ತು ಇನ್​ಸ್ಪೆಕ್ಟರ್ ಲಕ್ಷ್ಮಣ್ ಗೌಡ ಕೂಡ ಆರೋಪಿಗಳಾಗಿದ್ದು, ಲೋಕಾಯುಕ್ತ ಪೊಲೀಸರ ದಾಳಿ ವೇಳೆ ತಲೆಮರೆಸಿಕೊಂಡಿದ್ದಾರೆ.

ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಪಿಎಸ್ಐ ಮಾರುತಿ, ಇನ್​ಸ್ಪೆಕ್ಟರ್ ಲಕ್ಷ್ಮಣ್ ಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಐದು ಸಾವಿರ ರೂಪಾಯಿ ಲಂಚದ ಹಣ ಪಡೆಯುವಾಗ ಪ್ರಕರಣದ ಪ್ರಮುಖ ಆರೋಪಿ ಹೆಡ್​ ಕಾನ್​ಸ್ಟೇಬಲ್​​ ಆಂಜನೇಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪ್ರತ್ಯೇಕ ಘಟನೆ- ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಲೋಕಾಯುಕ್ತ ಬಲೆಗೆ: ಕಳೆದ ತಿಂಗಳು ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳು ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹರಿಹರ ತಾಲೂಕು ಪಂಚಾಯತ್ ಇಒ ರವಿ ಹಾಗೂ ಸಾರಥಿ ಗ್ರಾ. ಪಂ. ಪಿಡಿಒ ರಾಘವೇಂದ್ರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದವರು.

ಇದನ್ನೂ ಓದಿ: ಉದ್ಯೋಗಕ್ಕಾಗಿ ಲಂಚ: 16 ನೌಕರರನ್ನು ವಜಾಗೊಳಿಸಿದ ಟಿಸಿಎಸ್

ಜಿಲ್ಲೆಯ ಹರಿಹರದ ಬಳಿಯ ಅಮರಾವತಿ ಕಾಲೋನಿಯಲ್ಲಿ ಪಿಡಿಒ ರಾಘವೇಂದ್ರ ಅವರ ನಿವಾಸದಲ್ಲಿ 1.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇಒ ರವಿ ಅವರ ನಿರ್ದೇಶನದಂತೆ ಪಿಡಿಒ ಲಂಚ ಸ್ವೀಕರಿಸಿದ ಹಿನ್ನೆಲೆ ರವಿ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು.

ಶ್ರೀನಿವಾಸ ಟಿವಿ ಎಂಬುವರು ಹರಿಹರ ತಾಲೂಕಿನ ಸಾರಥಿ ಗ್ರಾ.ಪಂ ವ್ಯಾಪ್ತಿಯ ಕರಲಹಳ್ಳಿ ಬಳಿ ಒಂದು ಎಕರೆ ಜಮೀನು ಖರೀದಿಸಿ ಸೈಟ್ ಮಾಡಲು ಯೋಜಿಸಿದ್ದರು. ಅದಕ್ಕಾಗಿ ಭೂ ಪರಿವರ್ತನೆಗೆ ಅನುಮತಿ ನೀಡಲು ಕೋರಿದ್ದರು. ಇದಕ್ಕೆ ಇಒ ರವಿ 1.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪೂರೆ ನೇತೃತ್ವದಲ್ಲಿ ಇನ್ಸ್​​ಪೆಕ್ಟರ್​ಗಳಾದ ಮಧುಸೂದನ್, ಪ್ರಭು ಸೂರಿನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣಕ್ಕೆ ಲಂಚ: ಬೆಳಗಾವಿ ಡಿಡಿಪಿಐ ಲೋಕಾಯುಕ್ತ ಬಲೆಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.