ಬೆಂಗಳೂರು: ಗಾಳಿಪಟದ ದಾರಕ್ಕೆ ಸಿಲುಕಿ ಜೀವನ್ಮರಣದ ಮಧ್ಯೆ ಒದ್ದಾಡುತ್ತಿದ್ದ ಕಾಗೆಯ ಜೀವ ರಕ್ಷಿಸಲು ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ವೋರ್ವರು ಎತ್ತರದ ಕಂಬ ಹತ್ತಿ ಶ್ರಮಿಸಿರುವ ವಿಡಿಯೋ ವೈರಲ್ ಆಗಿದೆ. ಎರಡು ದಿನದ ಹಿಂದೆ ರಾಜಾಜಿನಗರ ಪ್ರವೇಶ ದ್ವಾರದ ಬಳಿ ಈ ಘಟನೆ ನಡೆದಿತ್ತು. ಹೆಡ್ ಕಾನ್ಸ್ಟೇಬಲ್ ಸುರೇಶ್ ಎಂಬವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ತವ್ಯದಲ್ಲಿದ್ದ ರಾಜಾಜಿನಗರ ಟ್ರಾಫಿಕ್ ಪೊಲೀಸ್ ಠಾಣೆಯ ಸುರೇಶ್ ಅವರು ಕಾಗೆಯೊಂದು ಗಾಳಿಪಟದ ದಾರಕ್ಕೆ ಸಿಲುಕಿ ಒದ್ದಾಡುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಎತ್ತರದ ಕಂಬಕ್ಕೆ ಹತ್ತಿ ಪಕ್ಷಿಯ ಪ್ರಾಣ ಉಳಿಸಿದ್ದಾರೆ. ಈ ಸಂಗತಿ ತಿಳಿದ ಸ್ಥಳಿಯ ಶಾಸಕ ಎಸ್.ಸುರೇಶ್ ಕುಮಾರ್ ಅವರು ಸುರೇಶ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಸನ್ಮಾನಿಸಿದ್ದಾರೆ.