ETV Bharat / state

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಆತ್ಮಹತ್ಯೆಗೆ ಶರಣು

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಶನಿವಾರ, ಮಂಡ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನಟರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

official commits suicide
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಆತ್ಮಹತ್ಯೆಗೆ ಶರಣು
author img

By ETV Bharat Karnataka Team

Published : Dec 2, 2023, 2:32 PM IST

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್​ನಲ್ಲಿ ಇಂದು (ಶನಿವಾರ) ನಡೆದಿದೆ. ನಟರಾಜ್ ಎಂಬವರು ಆತ್ಮಹತ್ಯೆಗೆ ಶರಣಾದ ಮಂಡ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ.

ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳಿಂದ ರಜೆಯಲ್ಲಿದ್ದ ಕುಣಿಗಲ್ ಮೂಲದ ಮೃತ ಅಧಿಕಾರಿ ನಟರಾಜ್ ಅವರು, ಇವತ್ತು ಡ್ಯೂಟಿಗೆ ತೆರಳಬೇಕಿತ್ತು.

ಕಳೆದ ಮೂರು ತಿಂಗಳ ಹಿಂದೆ ಮಂಡ್ಯಕ್ಕೆ ವರ್ಗಾವಣೆ ಆಗಿದ್ದರು. ಆರೋಗ್ಯದ ಸಮಸ್ಯೆ ಹಿನ್ನೆಲೆ ನಟರಾಜ್ ರಜೆಯಲ್ಲಿದ್ದರು. ಮೃತ ನಟರಾಜ್​ಗೆ ಮಗಳು, ಪತ್ನಿ ಇದ್ದಾರೆ. ಮಾನಸಿಕವಾಗಿ ಸಾಕಷ್ಟು ಡಿಸ್ಟರ್ಬ್ ಆಗಿದ್ದ ನಟರಾಜ್ ಅವರು, 2017ರಲ್ಲಿ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ರಜೆ ಮುಗಿಸಿ ಇವತ್ತು ಡ್ಯೂಟಿಗೆ ಹಾಜರಾಗಬೇಕಿದ್ದ ನಟರಾಜ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾವುದೇ ಡೆತ್​ನೋಟ್ ಪತ್ತೆಯಾಗಿಲ್ಲ. ಮೃತದೇಹವನ್ನು ಕುಟುಂಬಸ್ಥರು ಕುಣಿಗಲ್​ಗೆ ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಶಾಲೆಗಳಿಗೆ ಬಾಂಬ್​ ಬೆದರಿಕೆ ಇ- ಮೇಲ್ ಪ್ರಕರಣ​: ಇಂದು ಎಂದಿನಂತೆ ಕಾರ್ಯನಿರ್ವಹಿಸುತ್ತಿರುವ ಶಾಲೆಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.