ETV Bharat / state

ಆರೋಗ್ಯ ಶಿಬಿರಗಳ ಸದುಪಯೋಗ ಎಲ್ಲರೂ ಪಡೆಯಿರಿ: ಅಬಕಾರಿ ಸಚಿವ ಗೋಪಾಲಯ್ಯ - ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ

ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.

health camp organised by excise minister  k gopaliah
ಆರೋಗ್ಯ ಶಿಬಿರಗಳ ಸದುಪಯೋಗ ಎಲ್ಲರೂ ಪಡೆಯಿರಿ: ಅಬಕಾರಿ ಸಚಿವ ಗೋಪಾಲಯ್ಯ
author img

By

Published : Nov 27, 2022, 10:19 PM IST

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿನಿ ಬಡಾವಣೆಯಲ್ಲಿರುವ ಇಂಡಿಯನ್ ಹೈಸ್ಕೂಲ್ ನಲ್ಲಿಂದು ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಕನ್ನಡಕಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೋಪಾಲಯ್ಯ ಕ್ಷೇತ್ರದ ಜನರ ಉತ್ತಮ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಎರಡು ಬಾರಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿ ಔಷಧಿಗಳನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿಕೊಡಲಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ಕರೆ ನೀಡಿದರು.

ಆರೋಗ್ಯ ಶಿಬಿರಗಳ ಸದುಪಯೋಗ ಎಲ್ಲರೂ ಪಡೆಯಿರಿ: ಅಬಕಾರಿ ಸಚಿವ ಗೋಪಾಲಯ್ಯ

ಉಚಿತ ಕನ್ನಡಕ ವಿತರಣೆ: ಕಳೆದ ಭಾನುವಾರ ಇಂಡಿಯನ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೇತ್ರ ತಪಾಸಣೆಗೆ ಒಳಗಾಗಿದ್ದವರ ಪೈಕಿ ದೃಷ್ಟಿದೋಷವಿದ್ದ ಸುಮಾರು 250 ಜನರಿಗೆ ಇಂದು ಉಚಿತ ಕನ್ನಡಕಗಳನ್ನು ಸಚಿವರು ವಿತರಿಸಿದರು.

ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್, ‌ಕಲ್ಲೇಶಪ್ಪ, ಹನುಮಂತರಾಯಪ್ಪ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕನಕ ಜಯಂತಿ ಸಮಾರಂಭ.. ಮತ್ತೆ ಮೊಳಗಿದ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಕೂಗು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.