ETV Bharat / state

ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಪರಿಣಾಮ ಅಲ್ಲಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ.

ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ
author img

By

Published : Sep 7, 2022, 9:44 PM IST

ಬೆಂಗಳೂರು: ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರವಾಹ ಅಥವಾ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿ, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಗಳ ಚಿಕಿತ್ಸೆ ಹಾಗೂ ನಿರ್ವಹಣೆಗಾಗಿ ಎಲ್ಲ ಹಂತಗಳ ಆಸ್ಪತ್ರೆಗಳಲ್ಲಿ ಅಗತ್ಯ ಸನ್ನದ್ಧತೆಯನ್ನು ಖಚಿತ ಪಡಿಸಿಕೊಂಡು ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ.

1. ಸಾಂಕ್ರಾಮಿಕ ರೋಗಗಳ ನಿರ್ವಹಣೆಗೆ ಉಲ್ಲೇಖಗಳ ಅನ್ವಯ ಸಮಗ್ರ ಕ್ರಿಯಾ ಯೋಜನೆಯು ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರಬೇಕು.

2. ಅಗತ್ಯ ಮಾನವ ಸಂಪನ್ಮೂಲ, ಟೆಸ್ಟಿಂಗ್ ಕಿಟ್, ಔಷಧಗಳು, ರಾಸಾಯನಿಕ ಉಪಕರಣಗಳು ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳು ಅಗತ್ಯ ಪ್ರಮಾಣದಲ್ಲಿ ಲಭ್ಯವಿರಬೇಕು.

3. ಸಾಂಕ್ರಾಮಿಕ ರೋಗಗಳ ಚಿಕಿತ್ಸೆ ಮತ್ತು ನಿರ್ವಹಣೆಯನ್ನು ಎನ್​ಸಿಡಿಸಿ ಹಾಗೂ ಎನ್​ಸಿವಿ ಅಡಿ ಭಾರತ ಸರ್ಕಾರ ಮತ್ತು ಈ ನಿರ್ದೇಶನಾಲಯದಿಂದ ಸೂಚಿಸಿರುವ ಪ್ರಮಾಣಿತ ಕಾರ್ಯಾಚರಣ ವಿಧಾನಗಳ ಅನ್ವಯ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ನಡೆಸಬೇಕು.

4. ಯಾವುದೇ ರೀತಿಯ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ತ್ವರಿತ ಪ್ರತಿಕ್ರಿಯಾ ತಂಡಗಳು (Rapid Response Teams) ಅಗತ್ಯ ಔಷಧಗಳು, ಸಲಕರಣಿಗಳು ಹಾಗೂ ವಾಹನ ಸೌಲಭ್ಯದೊಂದಿಗೆ ಸನ್ನದ್ಧವಾಗಿರುವುದು.

5. ಪ್ರವಾಹ ಪೀಡಿತವಾಗುವಂತಹ (flood - prone) ವಾರ್ಡ್‌ಗಳು/ ಗ್ರಾಮಗಳು ಸೂಕ್ಷ್ಮಯೋಜನೆಯನ್ನು ಸಿದ್ಧಪಡಿಸಿಟ್ಟುಕೊಂಡು ತುರ್ತು ಪರಿಸ್ಥಿತಿಗೆ ಶೀಘ್ರವಾಗಿ ಸ್ಪಂದಿಸುವುದು.

6. ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ / ನಗರ ಆರೋಗ್ಯ ಕೇಂದ್ರ, ಇವರು ಮುನ್ನೆಚ್ಚರಿಕೆ ಕ್ರಮವಾಗಿ ರೋಗ ನಿರ್ದಿಷ್ಟ ಸರ್ವೇಕ್ಷಣೆಯನ್ನು (ಸಕ್ರಿಯ ಹಾಗೂ ಸ್ಥಿತ) ಹೆಚ್ಚಿಸುವುದು. ತಾಲೂಕು ವೈದ್ಯಾಧಿಕಾರಿಗಳು, ಅಗತ್ಯ ದತ್ತಾಂಶವನ್ನು ವಿಶ್ಲೇಷಿಸಿ, ರೋಗ ಪ್ರಸರಣವನ್ನು ಪತ್ತೆಹಚ್ಚಿ ತುರ್ತು ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸುವುದು.

7. ಕೀಟಶಾಸ್ತ್ರೀಯ ಸೂಚ್ಯಂಕಗಳನ್ನು (Entomological indices) ಮುಂಚಿತವಾಗಿಯೇ ವಿಶ್ಲೇಷಿಸಿ, ಉಲ್ಬಣಿಸಬಹುದಾದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು.

8. ಮುಖ್ಯ ಆರೋಗ್ಯಾಧಿಕಾರಿಗಳು ಬಿಬಿಎಂಪಿ / ಜಿಲ್ಲಾ ಆರೋಗ್ಯಾಧಿಕಾರಿಗಳು ಕ್ರಮವಾಗಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತಗಳಿಂದ ಅಗತ್ಯ ಸಹಕಾರವನ್ನು ಪಡೆಯುವುದು. ಆರೋಗ್ಯ ಇಲಾಖೆಯೂ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸರ್ವೇಕ್ಷಣಾ ಚಟುವಟಿಕೆಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವುದು ಮತ್ತು ಪರಿಸ್ಥಿತಿಯ ಕುರಿತು ಆಯುಕ್ತಾಲಯಕ್ಕೆ ನಿಗದಿತವಾಗಿ ಮಾಹಿತಿ ನೀಡುವುದು.

9. ಪ್ರವಾಹದ ಸಮಯ / ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳನ್ನು ಮನದಟ್ಟು ಮಾಡಿಕೊಡುವ ನಿಟ್ಟಿನಲ್ಲಿ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯನ್ನು ನಡೆಸಿ, ಅಗತ್ಯ ಸಹಕಾರವನ್ನು ಪಡೆಯುವುದು.

10. ಈ ಮೇಲಿನ ಎಲ್ಲಾ ಅಂಶಗಳ ಅನುಷ್ಠಾನದ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗಾಗಿ ಮತ್ತು ಸಮನ್ವಯವನ್ನು ಸಾಧಿಸಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸುವುದು.

ಸಾಮಾನ್ಯವಾಗಿ ಪ್ರವಾಹವು ಕಡಿಮೆಯಾಗುವ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿಯು ಸಾಮಾನ್ಯವಾಗುವರೆಗೂ ಸರ್ವೇಕ್ಷಣೆ ಹಾಗೂ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅಗತ್ಯವಾಗಿದೆ.

ಒಟ್ಟಾರೆಯಾಗಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಅಗತ್ಯ ಪ್ರಯತ್ನಗಳನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ರಂದೀಪ್ ಡಿ. ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

ಓದಿ: ಬೆಂಗಳೂರು: ಪೃಥ್ವಿ ರೆಡ್ಡಿ, ಭಾಸ್ಕರ್‌ ರಾವ್‌ ನೇತೃತ್ವದಲ್ಲಿ ಎಎಪಿಯಿಂದ ಪ್ರವಾಹ ಪ್ರದೇಶಗಳ ಪರಿಶೀಲನೆ....

ETV Bharat Logo

Copyright © 2024 Ushodaya Enterprises Pvt. Ltd., All Rights Reserved.