ಬೆಂಗಳೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಮತ್ತೊಮ್ಮೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಮಗೆ ಚಪ್ಪಾಳೆ ಬೇಡ - ಸೌಲಭ್ಯ ಕೊಡಿ, ನಮ್ಮ ಬೇಡಿಕೆಗಳನ್ನ ಈಡೇರಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನೌಕರರು ಇದೇ ಜೂನ್ 4 ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ಕಳೆದ ಮೇ 12 ರಂದು ಕಪ್ಪು ಪಟ್ಟಿ ಧರಿಸಿ ನೌಕರರು ಪ್ರತಿಭಟಿಸಿದ್ದರು. ಈಗ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.
ನೌಕರರು ಹೊರ ಗುತ್ತಿಗೆ ಪದ್ಧತಿ ಕೈಬಿಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.