ETV Bharat / state

ಕೊರೊನಾ ಹೆಚ್ಚಳ: 60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್​ ಕಡ್ಡಾಯ.. ತಜ್ಞರ ಸಲಹೆ - ​ ETV Bharat Karnataka

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನು ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ

ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ
author img

By ETV Bharat Karnataka Team

Published : Dec 18, 2023, 3:47 PM IST

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಮಾಸ್ಕ್​ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಸಲಹೆ ನೀಡಿದೆ. ಈ ಸಲಹೆಗಳನ್ನು ಪರಿಶೀಲಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದಾರೆ.

ರಾಜ್ಯದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಪರೀಕ್ಷೆ ನಡೆಸಿ ಸೋಂಕು ಹೆಚ್ಚಾದರೆ ಆಗ ಯಾವ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ತೀರ್ಮಾನ ಮಾಡಲಾಗುವುದು. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನೆಯೇ ಸಭೆ ನಡೆಸಿ ಕೆಲವು ಸಲಹೆಗಳನ್ನು ನೀಡಿದ್ದಾರೆ.

ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಗ್ನಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ವಸ್ತುಸ್ಥಿತಿ ಬಗ್ಗೆ ಅವಲೋಕನ : ಈಗಾಗಲೇ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ನಡೆಸಿ ಅಗತ್ಯ ತಯಾರಿ ಮಾಡಿಕೊಳ್ಳುವ ಮತ್ತು ವಸ್ತುಸ್ಥಿತಿ ಬಗ್ಗೆ ಅವಲೋಕನ ಮಾಡಿಕೊಳ್ಳುತ್ತಿದೆ. ಒಂದು ತಿಂಗಳಿಗೆ ಟೆಸ್ಟ್ ಮಾಡಲು 3 ಲಕ್ಷ ಆರ್​ಟಿಪಿಸಿಆರ್ ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಟೆಂಡರ್ ಕರೆದಿದ್ದು, ನಾಲ್ಕೈದು ದಿನದಲ್ಲಿ ಪೂರೈಕೆಯಾಗಲಿದೆ. ಔಷಧ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳುವುದು ಸೇರಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸನ್ನದ್ಧತೆ ಪರಿಶೀಲಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಮೂರು ತಿಂಗಳಿಗೆ ಬೇಕಾಗುವಷ್ಟು ಕೋವಿಡ್ ಟೆಸ್ಟ್ ಕಿಟ್ ತಕ್ಷಣವೇ ಖರೀದಿ ಮಾಡಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದ್ದು, ರಾಜ್ಯಾದ್ಯಂತ ಕೋವಿಡ್ ಟೆಸ್ಟ್ ಹೆಚ್ಚಳ ಮಾಡಲು ನಿರ್ಧಾರ. ಕೋವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡಲಾಗುತ್ತದೆ. ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆ ಗಳು ಹೆಚ್ಚಾಗುತ್ತಿವೆ. ವೈರಲ್‌ ಫೀವ‌ರ್, ಐಎಲ್‌ಐ ಸಾರಿ ಕೇಸ್‌ ಕಂಡು ಬಂದರೆ ಕೋವಿಡ್ ಟೆಸ್ಟ್​ ಮಾಡಿಸಿಕೊಳ್ಳಬೇಕಿದೆ.

ನಾಳೆ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ತಜ್ಞರ ಸಮಿತಿ ಸಭೆ ನಡೆಯಲಿದೆ. ಮುಂದಿನ ವಾರದೊಳಗೆ ಟಾಸ್ಕ್ ಪೋರ್ಸ್ ರಚನೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸದ್ಯ ಕೋವಿಡ್ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಜೆಎನ್ -1 ರೂಪಾಂತರಿ ಒಮಿಕ್ರಾನ್ ರೀತಿಯಲ್ಲಿಯೇ ಕಡಿಮೆ ಪ್ರಮಾಣ ಬೀರಲಿದೆ. ಲಸಿಕೆ ಪಡೆದಿರುವವರು ಸುರಕ್ಷಿತರಾಗಿದ್ದಾರೆ. ಆರೋಗ್ಯ ಸಮಸ್ಯೆ ಹೊಂದಿರುವವರು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಯಾರಿಗೂ ಝಿಕಾ ಪಾಸಿಟಿವ್ ಬಂದಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.