ಬೆಂಗಳೂರು: ಕೋವಿಡ್ 19ನ ಬಿಎ. 2.75 ಹಾಗೂ ಬಿಜೆ.1 ನ ಪುರ್ನಸಂಯೋಜಿತ (recombinant), ಓಮಿಕ್ರಾನ್ BQ.1 ಹೊಸ ಉಪರೂಪಾಂತರಿ ತಳಿಯು ನೆರೆಯ ಮಹಾರಾಷ್ಟ್ರ ಜಿಲ್ಲೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಹಾಗೂ ದೀಪಾವಳಿ ಹಬ್ಬ ಮತ್ತು ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕೆಳಗಿನ ಸೂಚನೆಗಳನ್ನು ನೀಡಿದೆ.
1. ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಹತ್ತಿರದ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳು ಕೋವಿಡ್ 19 ಪರೀಕ್ಷೆ ( ಗ್ಯಾಪಿಡ್ ಆಂಟಜೆನ್, ಟೆಸ್ಟಿಂಗ್ ಮಾಡಿಸಿಕೊಳ್ಳಬೇಕು, ನೆಗೆಟಿವ್, ಫಲತಾಂಶ ಬಂದಲ್ಲಿ ಆರ್‌ಟಿ ಪಿಸಿಆರ್ ಪರೀಕ್ಷೆ) ಮಾಡಿಸಿಕೊಳ್ಳುವುದು ಹಾಗೂ ಫಲಿತಾಂಶ ದೊರೆಯುವವರೆಗೂ ಸ್ವಯಂ ಪ್ರತ್ಯೇಕತೆಯಲ್ಲಿ ಇರಬೇಕು.
2. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆಯನ್ನು ಪಡೆದುಕೊಳ್ಳಬೇಕು.
3. ಈ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು – ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ, ಬೆಳಕಿಲ್ಲದಿರುವ ಸ್ಥಳಗಳು, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು, ಆರೋಗ್ಯ ಸಂಸ್ಥೆಗಳು.
4. ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣಗಳಲ್ಲಿ ಆಚರಿಸುವುದು ಹಾಗೂ ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವುದು.
5. ಕೋವಿಡ್ 19 ಲಸಿಕೆಯ ಬೂಸ್ಟರ್ ಮುಂಜಾಗ್ರತಾ ಡೋಸ್ ಲಸಿಕೆ ಇರುವವರು ಲಸಿಕೆಯನ್ನು ಪಡೆಯುವುದು, 60 ವರ್ಷ ವಯಸ್ಸು ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಈ ಹಿಂದೆ ಕೋವಿಡ್: 19 ಸೋಂಕಿಗೆ ತುತ್ತಾಗದವರು) ಶೀಘ್ರವೇ ಲಸಿಕೆಯನ್ನು ಪಡೆಯಬೇಕು. ಇದೇ ಅಲ್ಲದೇ, immunodeficient ಹಾಗೂ immunosuppressed, ಡಯಾಲಿಸಿಸ್ ಮಾಡಿಸಿಕೊಳ್ಳುವವರು ಮತ್ತು ಕ್ಯಾನ್ಸರ್ ನಿರೋಧಕ ಔಷಧಿಗಳನ್ನು ಸೇವಿಸುತ್ತಿರುವವರು ತಮಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಮಾಲೋಚನೆಯ ನಂತರ, ಆದ್ಯತೆಯ ಮೇಲೆ ಕೋವಿಡ್ 19 ಲಸಿಕೆಯನ್ನು ಪಡೆಯುವುದು ಸೂಕ್ತವಾಗಿದೆ.
6. ಕೋವಿಡ್ ಸೂಕ್ತ ನಡವಳಿಕೆಗಳಾದ (Covid Appropriate Behaviour) ಮಡಚಿದ ಮೊಣಕೈ ಒಳಗೆ ಕೆಮ್ಮುವುದು ಹಾಗೂ ಸೀನುವುದು, ಕರವಸ್ತ್ರ / ಐಕ್ಯೂ ಪೇಪರ್‌ನ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಸದಿರುವುದು (not to blow nose) ಹಾಗೂ ಉಗುಳದಿರುವುದು, ಕೈಗಳನ್ನು ಸೋಪ್ ಹಾಗೂ ನೀರಿನಿಂದ ತೊಳೆಯುವುದು, ಹಾಗೂ ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವುದು, ಇವುಗಳನ್ನು ಪಾಲಿಸಬೇಕು.
7. ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪರಿಸರ ಸ್ನೇಹಿ 'ಹಸಿರು ಪಟಾಕಿ'ಗಳನ್ನು ಬಳಸುವಂತೆ ಪ್ರೇರೇಪಿಸುವುದು.
ಈ ಸೂಚನೆ ಹಾಗೂ ಸಲಹೆಗಳನ್ನು ಸಾರ್ವಜನಿಕರು ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೆ ಸೂಚಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.
ಇದನ್ನೂ ಓದಿ: ಒಮಿಕ್ರಾನ್ ರೂಪಾಂತರಿಯ ಬಿಎಫ್ 7 ಹೊಸ ತಳಿ ಪತ್ತೆ.. ದೇಶದಲ್ಲಿಯೇ ಮೊದಲ ಪ್ರಕರಣ