ETV Bharat / state

ಚೈನಾ ನ್ಯುಮೋನಿಯಾ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ: ಸಚಿವ ದಿನೇಶ್ ಗುಂಡೂರಾವ್

ಇದುವರೆಗೂ ರಾಜ್ಯದಲ್ಲಿ ಚೈನಾ ನ್ಯುಮೋನಿಯಾ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಅವರು ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್
author img

By ETV Bharat Karnataka Team

Published : Nov 29, 2023, 6:48 PM IST

Updated : Nov 29, 2023, 7:59 PM IST

ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು : ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ನ್ಯುಮೋನಿಯಾ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಟಿಸಿದೆ. ಇದೇ ರೀತಿ ಕೇಂದ್ರ ಸರ್ಕಾರವೂ ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಿದೆ ಎಂದು ಹೇಳಿದರು.

ರಾಜ್ಯದಲ್ಲಿ ಇದುವರೆಗೆ ಚೈನಾ ನ್ಯುಮೋನಿಯಾಗೆ ಸಂಬಂಧಿಸಿದ ವೈರಸ್ ಪತ್ತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಆಸ್ಪತ್ರೆಗಳಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಸಿ ಎಚ್ಚರಿಕೆ ಮೂಡಿಸಬೇಕು ಎಂಬುದೂ ಸೇರಿದಂತೆ ಹಲವು ಬಗೆಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಕೆ ಮಾಡಲು ಆದ್ಯತೆ ನೀಡುವಂತೆ ಹೇಳಲಾಗಿದೆ ಎಂದರು.

ಜ್ವರ ಬಂದ ತಕ್ಷಣ ಜನ ಆಸ್ಪತ್ರೆಗಳಿಗೆ ತೆರಳಿ ವಿವಿಧ ಪರೀಕ್ಷೆಗಳಿಗೆ ಒಳಪಡಬೇಕು ಎಂದ ಅವರು, ಈ ಶೀತಜ್ವರ ಸಾಮಾನ್ಯವಾಗಿ ಐದು ದಿನಗಳವರೆಗೆ ಇರುತ್ತದೆ. ಹೀಗಾಗಿ ಯಾವ ಕಾರಣಕ್ಕೂ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು. ವಯೋವೃದ್ಧರು ಮತ್ತು ಮಕ್ಕಳು ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ವಿವಿಧ ರೋಗಗಳಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರಗಳನ್ನು ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಗಾಗ ಕೈ ತೊಳೆಯುತ್ತಿರಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಜನರಿಗೆ ಮನವಿ ಮಾಡಿಕೊಂಡರು. ಸೋಂಕಿಗೆ ಸಂಬಂಧಿಸಿದಂತೆ ನಿತ್ಯ ಅಧಿಕಾರಿಗಳು ನಿಗಾ ವಹಿಸುತ್ತಾರೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದ ಸಚಿವರು, ಇಷ್ಟೆಲ್ಲದರ ನಡುವೆಯೂ ಜನ ಆತಂಕಪಡುವ ಅಗತ್ಯವೇನಿಲ್ಲ. ಆದರೆ, ಸೋಂಕಿನ ಕುರಿತು ಎಚ್ಚರಿಕೆಯಿರಲಿ ಎಂದು ಸಲಹೆ ನೀಡಿದರು.

ಭ್ರೂಣಹತ್ಯೆ ಪ್ರಕರಣದಲ್ಲಿ ಆರೋಗ್ಯ ಮತ್ತು ಪೊಲೀಸ್​ ಇಲಾಖೆ ಜಂಟಿಯಾಗಿ ಕಣ್ಗಾವಲು : ಮಂಡ್ಯ - ಮೈಸೂರಿನಲ್ಲಿ ಪತ್ತೆಯಾದ ಭ್ರೂಣಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ರಾಜ್ಯ ಸರ್ಕಾರ. ಇದರ ವಿರುದ್ಧ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಣ್ಗಾವಲು ಇಡಬೇಕು ಎಂದು ಸೂಚಿಸಿದೆ ಎಂದರು.

ಮಂಡ್ಯ - ಮೈಸೂರಿನಲ್ಲಿ ಪತ್ತೆಯಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸರ್ಕಾರದ ಕಣ್ಣು ತೆರೆಸಿದೆ. ಇದು ನಮಗೆ ಮುಖಭಂಗ ಅಂತಲೇ ಹೇಳಬೇಕಾಗುತ್ತದೆ. ಇದರ ವಿರುದ್ಧ ಎಲ್ಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು. ಇನ್ನು ಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಿಯಮಿತವಾಗಿ ಸ್ಕ್ಯಾನಿಂಗ್ ಯಂತ್ರಗಳನ್ನು ಪರಿಶೀಲಿಸಬೇಕು. ಗರ್ಭಪಾತದಂತಹ ಪ್ರಕರಣಗಳ ಮೇಲೆ ಕಣ್ಣಿಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಇದೇ ರೀತಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಬೇಕು. ಮೂರು ತಿಂಗಳಿಗೊಮ್ಮೆ ಆರೋಗ್ಯ ಇಲಾಖೆಯ ಆಯುಕ್ತರು ಸಭೆ ನಡೆಸಿ, ಇದರ ಮೇಲೆ ಕಣ್ಣಿಡಬೇಕು ಎಂದ ಅವರು, ಆರು ತಿಂಗಳಿಗೊಮ್ಮೆ ತಾವೇ ಖುದ್ದಾಗಿ ಸಭೆ ನಡೆಸಿ ಪರಿಶೀಲನೆ ನಡೆಸುವುದಾಗಿ ಹೇಳಿದರು.

ಈಗ ಪತ್ತೆಯಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಇಂತಹ ಭ್ರೂಣಹತ್ಯೆಯ ಪ್ರಕರಣಗಳು ಮಂಡ್ಯ, ಮೈಸೂರು ಮಾತ್ರವಲ್ಲದೇ ರಾಜ್ಯದ ಎಲ್ಲ ಭಾಗಗಳಲ್ಲಿ ನಡೆದಿರುವ ಸಾಧ್ಯತೆ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಹಿನ್ನೆಲೆ ಇಡೀ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಇದು ಪುನರಾವರ್ತನೆಯಾಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಲಿಂಗ ಅನುಪಾತವನ್ನು ನೋಡಿದರೆ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಈಗ ಪತ್ತೆಯಾಗಿರುವ ಪ್ರಕರಣವನ್ನು ಗಮನಿಸಿದರೆ, ಇಂತಹ ಭ್ರೂಣಹತ್ಯೆಯೇ ಲಿಂಗ ಅನುಪಾತದಲ್ಲಿ ಅಸಮಾನತೆ ಕಾಣಲು ಮುಖ್ಯ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಚಿವರು, ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಇದನ್ನೂ ಓದಿ : ತಿಂಗಳಿಗೆ 20 ರಿಂದ 25 ಹೆಣ್ಣು ಭ್ರೂಣ ಹತ್ಯೆ: ವೈದ್ಯ ಸೇರಿ ಮತ್ತೆ ಐವರ ಬಂಧನ

Last Updated : Nov 29, 2023, 7:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.