ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಇಂದು ಜಾಲಹಳ್ಳಿಯಲ್ಲಿರುವ ಭಾರತೀಯ ವಾಯುಸೇನೆಯ ಕ್ಯಾಂಪಸ್‌ಗೆ ಭೇಟಿ ನೀಡಿ ವಾಯುಸೇನೆ ವತಿಯಿಂದ ನಿರ್ಮಿಸಲಾಗುತ್ತಿರುವ ಕೋವಿಡ್ ಹೆಲ್ತ್ ಸೆಂಟರ್ ಬಗ್ಗೆ ಮಾಹಿತಿ ಪಡೆದರು.
ಈ ಕೋವಿಡ್ ಹೆಲ್ತ್ ಸೆಂಟರ್ 50 ಆಕ್ಸಿಜನ್ ಬೆಡ್, 40 ಹೆಚ್ಡಿಯು ಬೆಡ್, 5 ವೆಂಟಿಲೇಟರ್ ಸಹಿತ 10 ಐಸಿಯು ಬೆಡ್ ಹೊಂದಿರಲಿದ್ದು, ಶೀಘ್ರದಲ್ಲೇ ಕಾರ್ಯಾ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಆ ನಂತರ ಯಶವಂತಪುರ ರೈಲು ನಿಲ್ದಾಣದ ಬಳಿಯಿರುವ ಬಿಬಿಎಂಪಿ ವ್ಯಾಪ್ತಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮತ್ತಿಕೆರೆಯ ಚೌಡೇಶ್ವರಿ ಬಸ್ ನಿಲ್ದಾಣದ ಬಳಿಯಿರುವ ಮೈದಾನದಲ್ಲಿ ನಿರ್ಮಿಸುತ್ತಿರುವ ಕೋವಿಡ್ ಕೇರ್ ಸೆಂಟರ್ಗೂ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ, ಅವರೊಂದಿಗೆ ಶಾಸಕ ಮುನಿರತ್ನ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಓದಿ: ಅನಗತ್ಯವಾಗಿ ಅರ್ಜಿ ಸಲ್ಲಿಸಿದರೆ ದಂಡ ವಿಧಿಸಬೇಕಾಗುತ್ತದೆ: ಹೈಕೋರ್ಟ್ ಎಚ್ಚರಿಕೆ