ಬೆಂಗಳೂರು: ದೇಶದಲ್ಲಿ ಕೋವಿಡ್-19ಗೆ ನಿನ್ನೆ ಮೊದಲ ಬಲಿ ಹಿನ್ನೆಲೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ತುರ್ತು ಸಭೆ ನಡೆಸಲಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.
ವಿಧಾನಸೌಧದಲ್ಲಿ ಸಭೆ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ವೈರಸ್ ಹರಡದಂತೆ ಹೇಗೆಲ್ಲಾ ಕ್ರಮವಹಿಸಬೇಕು?, ವೈದ್ಯರ ತಂಡವನ್ನ ಹಂತ ಹಂತವಾಗಿ ಹೇಗೆ ಸಜ್ಜುಗೊಳ್ಳಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಏರ್ಪೋರ್ಟ್ನಲ್ಲಿ ಮತ್ತಷ್ಟು ಒತ್ತು ಕೊಟ್ಟು ತಪಾಸಣೆ ನಡೆಸಲು ವಿಶೇಷ ತಂಡಗಳ ರಚನೆ, ವಿದೇಶಗಳಿಂದ ಬರುವವರ ತಪಾಸಣೆ, 14 ದಿನಗಳವರೆಗೆ ಮನೆಯಲ್ಲಿ ಐಸೋಲೇಶನ್ ಮಾಡಲಾಗುತ್ತದೆ. ಶಾಲಾ-ಕಾಲೇಜುಗಳ ರಜೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹೆಚ್ಚಿನ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿಡುವ ಬಗ್ಗೆ ತೀರ್ಮಾನಿಸಲಾಗುತ್ತಿದೆ.
ಕೊರೊನಾ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ:
ಇನ್ನು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಅಮೆರಿಕರಿಂದ ಬಂದದಿದ್ದ ಟೆಕ್ಕಿ, ಆತನ ಪತ್ನಿ, ಮಗಳಿಗೆ ಸೋಂಕು ದೃಢಪಟ್ಟಿತ್ತು. ನ್ಯೂಯಾರ್ಕ್ನಿಂದ ಲಂಡನ್ಗೆ ತೆರಳಿ, ಅಲ್ಲಿಂದ ಬೆಂಗಳೂರಿಗೆ ಕುಟುಂಬದವರು ಬಂದಿದ್ದರು. ಟೆಕ್ಕಿ, ಟೆಕ್ಕಿಯ ಪತ್ನಿ, ಮಗಳು ಮತ್ತು ಮತ್ತೊಬ್ಬ ಟೆಕ್ಕಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಗುಣಮುಖರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.