ETV Bharat / state

'ಯಾರನ್ನೋ ಮೆಚ್ಚಿಸಲು ತೀರ್ಮಾನ ಬದಲಿಸಲ್ಲ, ರಾಜ್ಯದ ಜನರ ಆರೋಗ್ಯ ಮುಖ್ಯ' - Health Minister Sudhakar statement on Corona SOP

ಶಿಕ್ಷಣ ಸಂಸ್ಥೆಗಳು, ಚಿತ್ರರಂಗದ ಅಭಿಮಾನಿಗಳು ಹಾಗೂ ಜಿಮ್ ಮಾಲೀಕರಿಂದ ಒತ್ತಡ ಬಂದಿದೆ. ನನಗೂ ಒತ್ತಡ ಬಂದಿದೆ. ಹಾಗಂತ ಎಲ್ಲರಿಗೂ ರಿಯಾಯಿತಿ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಸುಧಾಕರ್
author img

By

Published : Apr 4, 2021, 1:04 PM IST

ಬೆಂಗಳೂರು: ಯಾರನ್ನೋ ಮೆಚ್ಚಿಸಲು ತೀರ್ಮಾನ ಬದಲಿಸಲು ಸಾಧ್ಯವಿಲ್ಲ. ನಮಗೆ ರಾಜ್ಯದ ಜನರ ಆರೋಗ್ಯ ಮುಖ್ಯ. ಕೆಲವರು ನನ್ನನ್ನು ಟೀಕೆ ಮಾಡುತ್ತಿದ್ದಾರೆ. ಅದರ ಬಗ್ಗೆ ಬೇಜಾರಿಲ್ಲ. ರಾಜ್ಯದ ಜನರ ಆರೋಗ್ಯ ಕಾಪಾಡೋದು ಮೊದಲ ಆದ್ಯತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.

ಸದಾಶಿವನಗರದಲ್ಲಿ ಮಾತನಾಡಿದ ಅವರು, ಚಿತ್ರರಂಗಕ್ಕೆ ಮೂರು ದಿನ ಪೂರ್ಣ ರಿಯಾಯಿತಿ ಕೊಟ್ಟಿದ್ದಾರೆ. ಅದರ ಬಗ್ಗೆ ಹೆಚ್ಚು ಮಾತನಾಡೋದಿಲ್ಲ. ಜನರ ಜೀವನ, ಜೀವನೋಪಾಯ ಎರಡೂ ಮುಖ್ಯ. ಸಿಎಂ ಯಡಿಯೂರಪ್ಪ ಅವರಿಗೂ ಒತ್ತಡ ಬಂದಿದೆ. ಎಲ್ಲರ ಜೊತೆ ಸಮಾಲೋಚಿಸಿ ಸರಿದೂಗಿಸಬೇಕಾಗುತ್ತದೆ. ಹಾಗಾಗಿಯೇ ಸಿಎಂ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ ಎಂದರು.

ಶಿಕ್ಷಣ ಸಂಸ್ಥೆಗಳು, ಚಿತ್ರರಂಗದ ಅಭಿಮಾನಿಗಳು ಹಾಗೂ ಜಿಮ್ ಮಾಲೀಕರಿಂದ ಒತ್ತಡ ಬಂದಿದೆ. ನನಗೂ ಒತ್ತಡ ಬಂದಿದೆ. ಹಾಗಂತ ಎಲ್ಲರಿಗೂ ರಿಯಾಯಿತಿ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕೋವಿಡ್‌ ಜೊತೆಗೆ ಮಳೆಗಾಲದ ನಿರ್ವಹಣೆಗೂ ಸಿದ್ದರಾಗಿ: ಬಿಬಿಎಂಪಿ ಆಡಳಿತಾಧಿಕಾರಿ ಸೂಚನೆ

ಕೆ.ಮಂಜುಗೆ ಸಚಿವ ಸುಧಾಕರ್ ತಿರುಗೇಟು:

ಕೆ.ಮಂಜು ಅಂದರೆ ಯಾರೂ ಅಂತಾನೇ ನನಗೆ ಗೊತ್ತಿಲ್ಲ. ಯಾರ ಟೀಕೆಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳೋದಿಲ್ಲ. ಆರೋಗ್ಯ ಸಚಿವನಾಗಿ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ. ನಮಗೆ ಜನರ ರಕ್ಷಣೆ ಬಹಳ ಮುಖ್ಯ. ಟೀಕೆಗಳಿಗೆಲ್ಲಾ ತಲೆಕೆಡಿಕೊಳ್ಳೋದಿಲ್ಲ. ಸರ್ಕಾರ ಎಲ್ಲವನ್ನೂ ಸರಿದೂಗಿಸಬೇಕಾಗುತ್ತದೆ. ಹಾಗಾಗಿ ಸಿಎಂ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಇದು ತಪ್ಪು ಅಂತಾನೂ ಹೇಳೋದಿಲ್ಲ. ಆದರೆ, ಈಗ ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ನಿರ್ಮಾಪಕ ಕೆ.‌ಮಂಜುಗೆ ತಿರುಗೇಟು ನೀಡಿದರು.

ಖಳನಾಯಕನಾಗಿ ಕಾಣಿಸುತ್ತಿದ್ದೇನೆ:

ಕೆಲವರಿಗೆ ನಾನು ಖಳನಾಯಕನಾಗಿ ಕಾಣಿಸುತ್ತಿದ್ದೇನೆ. ಆದರೂ ಬಹಳಷ್ಟು ಜನರಿಗೆ ಆರೋಗ್ಯ ಸಚಿವನಾಗಿ ಅಂತಃಕರಣದಿಂದ ಕೆಲಸ ಮಾಡುತ್ತಿದ್ದೇನೆ. ಟೀಕೆಗಳಿಗೆಲ್ಲಾ ತಲೆ‌ಕೆಡಿಸಿಕೊಳ್ಳೋದಿಲ್ಲ. ಒಬ್ಬರಿಗೆ ರಿಯಾಯಿತಿ ಕೊಟ್ಟ ಬಳಿಕ ಮತ್ತೊಬ್ಬರು ಅದನ್ನ ಕೇಳ್ತಾರೆ. ನಾವೇನು ತಪ್ಪು ಮಾಡಿದ್ದೇವೆ ಅಂತಾ ಕೇಳೋದು ಸಹಜ. ಅದು ತಪ್ಪು ಅಂತಾನೂ ಹೇಳೋದಿಲ್ಲ. ಅವರ ಮನವಿಗಳನ್ನ ನಾನು ಸಿಎಂ ಗಮನಕ್ಕೆ ತರುತ್ತೇನೆ ಎಂದರು.

ಇದನ್ನೂ ಓದಿ: ಅಧಿಕಾರಿಗಳಿಂದ ಸಿಗದ ವಿನಾಯಿತಿ: ಟೋಲ್ ಬಳಿ ಪ್ರತ್ಯೇಕ ರಸ್ತೆ ನಿರ್ಮಿಸಿದ ಗ್ರಾ.ಪಂ ಸದಸ್ಯರು

25 ಲಕ್ಷ ಡೋಸ್​ಗೆ ಬೇಡಿಕೆ:

ನಿನ್ನೆ ಒಂದೇ ದಿನ 2,09,000 ಜನರಿಗೆ ಲಸಿಕೆ ಹಾಕಲಾಗಿದೆ. ಇದೂವರೆಗೂ 45 ಲಕ್ಷಕ್ಕೂ ಹೆಚ್ಚಿನ ಜನರಿಗೆ ಲಸಿಕೆ ಹಾಕಲಾಗಿದೆ. ಕೇಂದ್ರ ಆರೋಗ್ಯ ಸಚಿವರು, ಇಲಾಖಾ ಕಾರ್ಯದರ್ಶಿ ಜೊತೆ ಚರ್ಚೆ ನಡೆಸಿದ್ದೇನೆ. ಈಗಿರುವ 8 ಲಕ್ಷ ಡೋಸ್ ಇನ್ನು ಮೂರು ದಿನಕ್ಕೆ ಮುಗಿಯುತ್ತದೆ. ಈಗಾಗಲೇ 25 ಲಕ್ಷ ಡೋಸ್ ಗೆ ಬೇಡಿಕೆ ಇಟ್ಟಿದ್ದೇನೆ.‌ ಎರಡು ಕಂತುಗಳಲ್ಲಿ ಡೋಸ್ ಪೂರೈಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ. ಎರಡು ದಿನಗಳಲ್ಲಿ ಮೊದಲ ಕಂತು ಬರಲಿದ್ದು, ನಂತರ ಉಳಿದದ್ದು ಕಳುಹಿಸುವ ಭರವಸೆ ಸಿಕ್ಕಿದೆ ಎಂದರು.

ಮಾರ್ಗಸೂಚಿ ಸರಿಯಾಗಿ ಪಾಲನೆಯಾಗುತ್ತಿಲ್ಲ

ಸರ್ಕಾರದ ಮಾರ್ಗಸೂಚಿ ಸರಿಯಾಗಿ ಪಾಲನೆಯಾಗುತ್ತಿಲ್ಲ. ಬಸ್ ಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ಜನರು ಗುಂಪಾಗಿ ಸೇರುತ್ತಿದ್ದಾರೆ. ಆರೋಗ್ಯ ಸಚಿವನಾಗಿ ಏನು ಮಾಡಬೇಕೋ ಅದನ್ನ ಮಾಡಬಹುದು. ಎಲ್ಲವನ್ನೂ ನಾನೇ ಹೋಗಿ ನೋಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕದ್ರಂಜೆಯಲ್ಲಿ ಪ್ರಾಚೀನ ಶಿವಲಿಂಗ ಪತ್ತೆ

ಮಹಾರಾಷ್ಟ್ರ ನೋಡಿ ನಾವು ಎಚ್ಚೆತ್ತುಕೊಳ್ಳಬೇಕು:

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಕೊರೊನಾ ಸೋಂಕಿನ ಹೊಡೆತ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಐವತ್ತು ಸಾವಿರ ಸೋಂಕಿನ ಪ್ರಕರಣ ದಾಖಲಾಗಿದೆ. 500 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ಆಗದಂತೆ ನೋಡಿಕೊಳ್ಳಬೇಕಿದೆ. ಇಲ್ಲದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಕಷ್ಟವಾಗಲಿದೆ ಎಂದು ಎಚ್ಚರಿಕೆ ನೀಡಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.