ETV Bharat / state

ಆರೋಗ್ಯ ಸಚಿವ ಸುಧಾಕರ್​ಗೆ ಕೋವಿಡ್ ಪಾಸಿಟಿವ್ ದೃಢ

ಆರೋಗ್ಯ ಸಚಿವ ಡಾ. ಸುಧಾಕರ್​ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸಚಿವರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

health-minister-sudhakar-tested-covid-positive
ಆರೋಗ್ಯ ಸಚಿವ ಸುಧಾಕರ್​ಗೆ ಕೋವಿಡ್ ಪಾಸಿಟಿವ್ ದೃಢ
author img

By

Published : Jun 2, 2022, 10:56 PM IST

ಬೆಂಗಳೂರು: ಆರೋಗ್ಯ ಸಚಿವ ಡಾ. ಸುಧಾಕರ್​ಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ಸಣ್ಣ ಪ್ರಮಾಣದ ಜ್ವರ ಬಂದಿದ್ದರಿಂದ ತಪಾಸಣೆ ಮಾಡಿಕೊಂಡಾಗ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ.

ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್​​ನ ಮೂರು ಅಲೆಗಳ ಸಂದರ್ಭಗಳಲ್ಲಿಯೂ ಸೋಂಕಿನಿಂದ ಪಾರಾಗಿ ಈಗ ಪಾಸಿಟಿವ್​ ಬಂದಿದೆ ಎಂದು ತಿಳಿಸಿದ್ದಾರೆ. ಕೋವಿಡ್​​ನ ಕೆಲ ಲಕ್ಷಣಗಳು ತಮ್ಮಲ್ಲಿ ಕಾಣಿಸಿಕೊಂಡಿವೆ. ಹೋಂ ಐಸೋಲೇಷನ್​​ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.

    ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.

    ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ.

    — Dr Sudhakar K (@mla_sudhakar) June 2, 2022 " class="align-text-top noRightClick twitterSection" data=" ">

ಸಂಪೂರ್ಣ ಲಸಿಕೆ ಪಡೆದಿರುವುದರಿಂದ ಅಪಾಯದಿಂದ ಪಾರಾಗಿದ್ದೇನೆ. ಇತ್ತೀಚಿನ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವವರು ಒಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಚಿವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸರ್ಕಾರಕ್ಕೆ ಮತ್ತೊಂದು ಖಡಕ್​ ಪತ್ರ ಬರೆದ ಸಾಹಿತಿ ದೇವನೂರು ಮಹಾದೇವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.