ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕೇಸ್ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಜನರ ಆರೋಗ್ಯ ದೃಷ್ಟಿಯಿಂದ ಮೂರನೇ ಡೋಸ್ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಆದರೆ, ಬೂಸ್ಟರ್ ಡೋಸ್ ಪಡೆಯಲು ಆರೋಗ್ಯ ಕಾರ್ಯಕರ್ತರು ಹಿಂದೇಟು ಹಾಕುತ್ತಿದ್ದಾರೆ.
ಈ ಕುರಿತಂತೆ ಆರೋಗ್ಯ ಸಚಿವ ಸುಧಾಕರ್ ಮತ್ತು ಸಿಎಂ ಬಸವರಾಜ್ ಬೊಮ್ಮಯಿಯವರು ಅಸಮಾಧಾನ ಹೊರ ಹಾಕಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಮನವಿ ಮಾಡಿದ್ದರು.
ಇದೀಗ ಆಯಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪೂರ್ಣಗೊಳಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಇಲಾಖೆ ಜವಾಬ್ದಾರಿ ವಹಿಸಲಾಗಿದ್ದು, ಇದಕ್ಕೆ ಅವರೇ ನೇರ ಹೊಣೆಗಾರರಾಗಿರುತ್ತಾರೆ.
ಹೀಗಾಗಿ, ಜಿಲ್ಲೆಯ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಮೇಲುಸ್ತುವಾರಿವಹಿಸಿ ಶೀಘ್ರವೇ ಸಂಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು, ಆರೋಗ್ಯ ಕಾರ್ಯಕರ್ತರು ಸೋಂಕಿನಿಂದ ಹೆಚ್ಚಿನ ಅಪಾಯ ಎದುರಿಸುವ ಸಾಧ್ಯತೆ ಇದೆ. ಹೀಗಾಗಿ, ಕೋವಿಡ್ ಎರಡು ಲಸಿಕೆ ಪಡೆದ 9 ತಿಂಗಳು (39 ವಾರಗಳು) ಪೂರೈಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಕೂಡಲೇ ಬೂಸ್ಟರ್ ಡೋಸ್ ಅನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿಂದು 40,499 ಜನರಿಗೆ ಕೊರೊನಾ ಪಾಸಿಟಿವ್.. 23,209 ಮಂದಿ ಚೇತರಿಕೆ