ETV Bharat / state

ರಾಮ ಮಂದಿರ ಉದ್ಘಾಟನೆ: ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ - ಪೊಲೀಸ್ ಆಯುಕ್ತ ಬಿ‌‌ ದಯಾನಂದ

ರಾಮ ಮಂದಿರ ಉದ್ಘಾಟನೆಯ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪೊಲೀಸ್​ ಇಲಾಖೆ
ಪೊಲೀಸ್​ ಇಲಾಖೆ
author img

By ETV Bharat Karnataka Team

Published : Jan 19, 2024, 2:32 PM IST

ಬೆಂಗಳೂರು: ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಅಹಿತರ ಘಟನೆಗಳಿಗೆ ಆಸ್ಪದವಿರದಂತೆ ನಗರ ಪೊಲೀಸರು ಅಂದು ತುರ್ತು ರಜೆ ಹೊರತುಪಡಿಸಿ ಯಾರೂ ವಾರದ ರಜೆ ಹಾಗೂ ಸಾಂದರ್ಭಿಕ ರಜೆ ಪಡೆಯಕೂಡದು. ಮೇಲಾಧಿಕಾರಿಗಳು ರಜೆಗೆ ಅನುಮತಿ ನೀಡಕೂಡದು ಎಂದು ನಗರ ಪೊಲೀಸ್ ಆಯುಕ್ತ ಬಿ‌‌.ದಯಾನಂದ ಮೌಖಿಕವಾಗಿ ಸೂಚನೆ ನೀಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಡಿಜಿಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ವಾರ್ಷಿಕ ಸಭೆ ನಡೆಸಿದ್ದರು. ಈ ವೇಳೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ರಾಜ್ಯದಲ್ಲಿ ಕೋಮುಗಲಭೆಯಂತಹ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು. ಆಯಾ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಕಾನೂನು‌ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಸೂಚಿಸಿದ್ದರು.

ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಡಿಸಿಪಿಗಳೊಂದಿಗೆ ಸಭೆ ನಡೆಸಿ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಬೇಕು. ತುರ್ತು ರಜೆ ಹೊರತುಪಡಿಸಿದರೆ ವಾರದ ರಜೆ ನೀಡಬಾರದೆಂದು ಸೂಚಿಸಿದ್ದಾರೆ. ರ‍್ಯಾಲಿ, ಪ್ರತಿಭಟನೆ, ಮೆರವಣಿಗೆಗೆ ಅನುಮತಿ ನೀಡಕೂಡದು. ಆಯಾ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಭೆ ನಡೆಸುವಂತೆಯೂ ತಿಳಿಸಿದ್ದಾರೆ. ಭದ್ರತೆಗಾಗಿ ಸುತ್ತಮುತ್ತಲಿನ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಯಿಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀಗಳು ಪಾಲ್ಗೊಳ್ಳುತ್ತಿಲ್ಲ: ಮಠದಿಂದ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.