ಬೆಂಗಳೂರು: ಸಿಲಿಕಾನ್ ಸಿಟಿಯೂ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ರಾಮನಗರ, ಉತ್ತರ ಕನ್ನಡ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಮತ್ತಷ್ಟು ಹೆಚ್ಚಾಗಲಿದೆ. ಚಿಕ್ಕಮಗಳೂರು ಹಾಗು ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ ಶನಿವಾರ ಸಂಜೆಯಿಂದಲೇ ಮಳೆಯಾಗುತ್ತಿದೆ. ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವ ಜನರು, ವಾಹನ ಸವಾರರು ಪರದಾಡಿದ್ದಾರೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಇದನ್ನೂ ಓದಿ: ಮಳೆ ಅಬ್ಬರಕ್ಕೆ ಮತ್ತೆ ನಲುಗಿದ ಬೆಂಗಳೂರಿನ ಸಾಯಿ ಬಡಾವಣೆ: ಸಚಿವ ಬೈರತಿ ಬಸವರಾಜ್ ಪರಿಶೀಲನೆ