ETV Bharat / state

ರಾಜ್ಯದ 5 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಎಚ್ಚರಿಕೆ ವಹಿಸಲು ಡಿಸಿಗಳಿಗೆ ಸೂಚನೆ

ಇಂದಿನಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರಿ ಮಳೆ
ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರಿ ಮಳೆ
author img

By

Published : Apr 6, 2023, 5:22 PM IST

ಬೆಂಗಳೂರು : ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದು ಸಂಜೆಯಿಂದ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಇಂದು ಪ್ರಕಟಣೆ ಹೊರಡಿಸಿರುವ ಬೆಂಗಳೂರು ಹವಾಮಾನ ಕೇಂದ್ರ, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಬಿರುಗಾಳಿ, ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಜನರು ಮನೆಗಳಿಂದ ಹೊರಹೋಗುವ ಮುನ್ನ ಎಚ್ಚರವಹಿಸುವುದು ಸೂಕ್ತ ಎಂದು ಸಲಹೆ ನೀಡಿದೆ.

30-40 ಕಿ.ಮೀ ವೇಗದಲ್ಲಿ ಗಾಳಿ: ಐದು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮಾರುತಗಳು ರಾಜ್ಯದ ಗಡಿದಾಟಿ ಹೋದ ನಂತರ ಮಳೆಯಾಗುವ ಸಾಧ್ಯತೆ ಇದೆ. ತಗ್ಗು ಹಾಗೂ ನದಿ ತೀರದ ಪ್ರದೇಶಗಳಲ್ಲಿ ವಾಸಿಸುವ ಜನರು, ಈ ಜಿಲ್ಲೆಗಳಿಗೆ ಪ್ರವಾಸ ಹೊರಟಿರುವ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಳೆ: ರಾಜಧಾನಿಯ ಕೆಲವು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ನಗರದ ದಕ್ಷಿಣ ಭಾಗದ ಆರ್.ಆರ್.ನಗರ, ಮೈಸೂರು ರಸ್ತೆ, ಕೆಂಗೇರಿ, ವಿದ್ಯಾಪೀಠದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ವಿಜಯನಗರ, ಕೆ.ಆರ್.ಪುರ, ಅತ್ತಿಗುಪ್ಪೆ ಭಾಗದಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ದೇವನಹಳ್ಳಿ ಸುತ್ತಮುತ್ತ ಮಳೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ (ಏಪ್ರಿಲ್ 4ರಂದು) ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿದಿದೆ. ಸತತ ಎರಡು ಗಂಟೆಗಳವರೆಗೆ ಬೇಸಿಗೆ ಮಳೆ ಅಬ್ಬರಿಸಿತ್ತು. ಪರಿಣಾಮ ವಾಹನ ಸವಾರರು ಹೈರಾಣಾಗಿದ್ದರು. ಬಿಟ್ಟೂಬಿಡದೆ ಸುರಿದ ಮಳೆಯಿಂದಾಗಿ ದೇವನಹಳ್ಳಿ ಹೊರವಲಯದ ಬೆಂಗಳೂರು ರಸ್ತೆಯ ಕೆಂಪೇಗೌಡ ಸರ್ಕಲ್​ನಲ್ಲಿ ಸುಮಾರು ಮೂರ್ನಾಲ್ಕು ಅಡಿಯಷ್ಟು ನೀರು ನಿಂತಿತ್ತು. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಮತ್ತು ಇತರೆ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲಾಗದೆ ಪರದಾಡಿದ್ದರು. ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್​ಗಳು ನೆಲಕ್ಕುರುಳಿದ್ದವು.

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಬಿರುಗಾಳಿ‌ ಸಹಿತ ಭಾರಿ ಮಳೆ: ವಾಹನ ಸವಾರರು ಹೈರಾಣ

ಗುಡುಗುಸಹಿತ ಬಿರುಗಾಳಿ ಮಳೆ: ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನಗಳ ಮಾರ್ಗ ಬದಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.