ಬೆಂಗಳೂರು : ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಮಂಗಳೂರು: ತಾತನ ಪಿಂಡ ಪ್ರದಾನ ಮಾಡಲು ಬಂದ ಯುವತಿಯರು ಸಮುದ್ರ ಪಾಲು
ಏಪ್ರಿಲ್ 11ರವರೆಗೂ ಮಳೆ : ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ಬೆಂಗಳೂರು, ಮೈಸೂರು,ಕೊಡಗು, ಹಾಸನ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.