ETV Bharat / state

ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಒಳನಾಡಿನಲ್ಲಿ ಅ.5 ರಂದು, ಹಗುರದಿಂದ ಸಾಧಾರಣವಾಗಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಅ.6 ಹಾಗೂ 7ರಂದು ಬಹುತೇಕ‌ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಲವು ಕಡೆ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಬಳ್ಳಾರಿಯ ಸಂಡೂರಿನಲ್ಲಿ 4 ಸೆಂ.ಮೀ, ಅಥಣಿ ಬೆಳಗಾವಿ ಜಿಲ್ಲೆಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಎಲ್ಲೋ ಅಲರ್ಟ್ ಘೋಷಣೆ
ಎಲ್ಲೋ ಅಲರ್ಟ್ ಘೋಷಣೆ
author img

By

Published : Oct 5, 2020, 7:06 PM IST

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅ.6 ಹಾಗೂ 7 ರಂದು ಯೆಲ್ಲೋ ಅಲರ್ಟ್ ಗೋಷಿಸಲಾಗಿದೆ ಎಂದು, ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ದಕ್ಷಿಣ ಒಳನಾಡಿನಲ್ಲಿ ಅ.5 ರಂದು, ಹಗುರದಿಂದ ಸಾಧಾರಣವಾಗಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಅ.6 ಹಾಗೂ 7ರಂದು ಬಹುತೇಕ‌ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಲವು ಕಡೆ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಬಳ್ಳಾರಿಯ ಸಂಡೂರಿನಲ್ಲಿ 4 ಸೆಂ.ಮೀ, ಅಥಣಿ ಬೆಳಗಾವಿ ಜಿಲ್ಲೆಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿಎಸ್ ಪಾಟೀಲ್

ಕರಾವಳಿ ಜಿಲ್ಲೆಗಳಲ್ಲಿ ಅ.5 ರಿಂದ 7ರವರೆಗೆ ಹಗುರದಿಂದ ಸಾಧಾರಣವಾಗಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 8 ಹಾಗೂ 9ರಂದು ಕೆಲವು ಕಡೆ ಮಾತ್ರ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಅ.5 ರಂದು ಹಗುರದಿಂದ ಸಾಧಾರಣವಾಗಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. 6ರಿಂದ 9 ಕೆಲವು ಕಡೆ ಮಾತ್ರ ಮಳೆಯಾಗಬಹುದು. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.