ಬೆಂಗಳೂರು : ನಗರದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಕೆಲವೆಡೆ ಮರಗಳು ಧರೆಗುರುಳಿವೆ.
ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದಿಂದ ಮಳೆಯಾಗುತ್ತಿದ್ದು, ನಗರದ ಅನೇಕ ಕಡೆ ನೀರು ನುಗ್ಗಿದೆ. ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.
ಹಲವೆಡೆ ಮಳೆ : ಆರ್ಆರ್ ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ ಸೇರಿ ಬಹುತೇಕ ಕಡೆ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.
ಪ್ರಮುಖ ರಸ್ತೆಗಳಲ್ಲಿ ನೀರು : ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆಆರ್ ಪುರ ಸೇರಿ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡು ಬಂದಿದೆ.
ಇದನ್ನೂ ಓದಿ: ನಾ ಹಣ ಕೊಟ್ಟಿಲ್ಲ ಅಂದ್ರೆ ಪೂರಕ ಅಂದಾಜು ಯಾಕಿರೋದು?; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು