ಬೆಂಗಳೂರು : ನಗರದ ಹಲವು ಭಾಗಗಳಲ್ಲಿ ಸೋಮವಾರ ಮಧ್ಯಾಹ್ನ ಗುಡುಗು ಸಹಿತ ಭಾರೀ ಮಳೆಯಾಗಿದೆ. ಕೆಲವೆಡೆ ಮರಗಳು ನೆಲಕ್ಕುರುಳಿವೆ. ನಗರದ ಹಲವೆಡೆ ನೀರು ನುಗ್ಗಿದ್ದು, ವಾಹನ ಸವಾರರು ಕೆಲಸದ ನಂತರ ಮನೆ ಸೇರಲು ಪರದಾಡುವಂತಾಯಿತು. ಸಂಜೆ 5ರ ಬಳಿಕ ಧಾರಾಕಾರ ಮಳೆ ಪ್ರಾರಂಭವಾಗಿದೆ.
ಆರ್‌ಆರ್‌ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರಂ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ ಸೇರಿ ಬಹುತೇಕ ಕಡೆ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.
ಪ್ರಮುಖ ರಸ್ತೆಗಳಲ್ಲಿ ನೀರು : ಭಾರಿ ಮಳೆಗೆ ಎಂ.ಜಿ ರಸ್ತೆ, ಮಲ್ಲೇಶ್ವರಂ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಈ ಎಲ್ಲಾ ಸ್ಥಳಗಳಲ್ಲಿ ನೀರು ನಿಂತಿದೆ.
ಓದಿ: ತೆಲಂಗಾಣ ಮಳೆಯಾರ್ಭಟ.. ಆಸ್ಪತ್ರೆಯ ICU ವಾರ್ಡ್ನಲ್ಲಿ ರೋಗಿ ಮೇಲೆ ಕಳಚಿ ಬಿದ್ದ ಮೇಲ್ಛಾವಣಿ..