ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆರಾತ್ರಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇಲ್ಲಿನ ಕೆ.ಆರ್.ಸರ್ಕಲ್ ಅಂಡರ್ ಪಾಸ್ನಲ್ಲಿ ಮಳೆ ನೀರಿನಲ್ಲಿ ಬಿಎಂಟಿಸಿ ಬಸ್ವೊಂದು ಸಿಲುಕಿತ್ತು.
ಸಿಟಿ ಮಾರ್ಕೆಟ್ಗೆ ಹೋಗಲು ಶಿವಾಜಿನಗರದಿಂದ ಬರುತ್ತಿದ್ದ ಬಿಎಂಟಿಸಿ ಬಸ್ ಕೆ.ಆರ್.ಸರ್ಕಲ್ ಅಂಡರ್ ಪಾಸ್ ಬಳಿ ಬಂದಿದೆ. ಈ ವೇಳೆ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿದ್ದರಿಂದ ಬಸ್ ನಿಂತು ಹೋಗಿದೆ. ಹೀಗಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುವಂತಾಯಿತು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತ್ವರಿತ ರಕ್ಷಣಾಕಾರ್ಯ ನಡೆಸಿ ಪ್ರಯಾಣಿಕರನ್ನು ಕೆಳಗಿಳಿಸುವ ಕಾರ್ಯ ಮಾಡಿದರು.
ಹಾಗೆಯೇ ನಗರದ ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಜಯನಗರ, ಬನ್ನೇರ್ ಘಟ್ಟ ರಸ್ತೆ, ದೊಮ್ಮಲೂರು, ಚಾಮರಾಜಪೇಟೆ, ಮೈಸೂರು ರಸ್ತೆ, ಇಂದಿರಾನಗರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಆದರೆ ಮಳೆಯಿಂದ ಯಾವುದೇ ಯಾವುದೇ ಹಾನಿಯಾಗಿಲ್ಲವೆಂದು ಎಂದು ಬಿಬಿಎಂಪಿ ಕಂಟ್ರೋಲ್ ರೂಂ ಸಿಬ್ಬಂದಿ ತಿಳಿಸಿದ್ದಾರೆ.