ETV Bharat / state

ಬೆಂಗಳೂರಿನಲ್ಲಿ ಮಳೆ ಅಬ್ಬರ: ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ - ಈಟಿವಿ ಭಾರತ ಕನ್ನಡ

ಸಿಲಿಕಾನ್​ ಸಿಟಿಯಲ್ಲಿ ಮಳೆ ಮುಂದುವರೆದಿದೆ. ವರುಣನ ಆರ್ಭಟ ಹಿನ್ನೆಲೆಯಲ್ಲಿ ಮುಂದಿನ ಎರಡು ಹವಾಮಾನ ಇಲಾಖೆಯು ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Etv Bharatheavy-rain-in-many-parts-of-bengaluru
ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ
author img

By

Published : Aug 27, 2022, 10:08 PM IST

ಬೆಂಗಳೂರು: ನಗರದಲ್ಲಿ ಶನಿವಾರ ಸಂಜೆಯಿಂದಲೇ ಮಳೆ ಮುಂದುವರೆದಿದೆ. ಮಳೆ ನೀರಿನಿಂದ ಹಲವೆಡೆ ವಾಹನ ಸವಾರರು ಪರದಾಡುವಂತಾಗಿದೆ. ಕೆಲಸ ಮುಗಿಸಿ ಮನೆಗೆ ಹೋಗುವ ಧಾವಂತದಲ್ಲಿದ್ದ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಮುಂದಿನ ಎರಡು ದಿನ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದೆ.

ಸಿಲಿಕಾನ್ ಸಿಟಿಯ ಮೆಜೆಸ್ಟಿಕ್, ಎಂ.ಜಿ ರಸ್ತೆ, ಶಿವಾಜಿನಗರ, ಬಿಟಿಎಂ ಲೇಔಟ್ ಸೇರಿದಂತೆ ಗುಡುಗು ಮಳೆಯ ಆರ್ಭಟ ಮುಂದುವರೆದಿದೆ. ಜಯನಗರ, ಜೆ.ಪಿ ನಗರ, ಗಾಂಧಿ ಬಜಾರ್, ಶಾಂತಿನಗರ, ಕೋರಮಂಗಲ, ವಿವೇಕನಗರ, ಅಶೋಕ ಪಿಲ್ಲರ್ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಮಳೆ ಜೋರಾಗಿದೆ. ಕೋರಮಂಗಲದಲ್ಲಿ ಮರ ಧರೆಗುರುಳಿರುವ ಕುರಿತು ಬಿಬಿಎಂಪಿ ಮಾಹಿತಿ ನೀಡಿದೆ.

ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಅಂಡರ್ ಪಾಸ್​​ಗಳಲ್ಲಿ ನೀರು ತುಂಬಿಕೊಂಡಿದೆ. ವಿದ್ಯುತ್‌ ಪೂರೈಕೆ ಸ್ಥಗಿತವಾಗಿದ್ದರಿಂದ ಹಲವು ಬಡಾವಣೆಗಳಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಮಳೆ ಅನಾಹುತಕ್ಕೆ ಶಾಶ್ವತ ಪರಿಹಾರ ಒದಗಿಸಲು ವಿಫಲರಾಗಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ನಗರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದೆರಡು ದಿನಕ್ಕಿಂತಲೂ ಮಳೆಯ ಪ್ರಮಾಣ ಹೆಚ್ಚಿದೆ. ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರದಲ್ಲಿ ಸುರಿಯುತ್ತಿರುವ ಮಳೆ 2 ದಿನ ಮುಂದುವರೆಯಲಿದೆ. ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಚಾಲಕನ ದುಸ್ಸಾಹಸ.. ನೀರಿನ ರಭಸಕ್ಕೆ ಉರುಳಿದ ಸಿಮೆಂಟ್ ಲಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.