ಬೆಂಗಳೂರು: ರಾಜ್ಯ ರಾಜಧಾನಿಯ ಹಲವು ಕಡೆಗಳಲ್ಲಿ ಭಾನುವಾರ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಡಿವಾಳ, ಕೋರಮಂಗಲ, ಸರ್ಜಾಪುರ, ಬನ್ನೇರುಘಟ್ಟ ರಸ್ತೆಯಲ್ಲಿ ಆಲಿಕಲ್ಲು ಮಳೆಯಾಗಿದ್ದು, ಇದರಿಂದ ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಯಿತು. ಗಾಂಧಿನಗರ, ಮಲ್ಲೇಶ್ವರ, ಶಿವಾನಂದ ವೃತ್ತ, ಕುಮಾರ ಪಾರ್ಕ್, ರಾಜಾಜಿನಗರ, ಸುಬ್ರಮಣ್ಯ ನಗರ, ಜಕ್ಕೂರು, ಯಲಹಂಕ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಮಳೆಯ ಕಾರಣಕ್ಕೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿವೆ. ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.
ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಗಿಂತ ಗುಡುಗು, ಸಿಡಿಲುಗಳ ಆರ್ಭಟವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲೇ ಬಸವ ಜಯಂತಿ ಆಚರಣೆಗೆ ಸರ್ಕಾರದ ಆದೇಶ