ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮುಂದಿನ 48 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದ್ದು, ಉತ್ತರ ಆಂಧ್ರಪ್ರದೇಶ ಅಥವಾ ಒಡಿಶಾಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಪ್ರಭಾವದಿಂದ ಕರ್ನಾಟಕ ಸೇರಿ ಈ ರಾಜ್ಯಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಅಕ್ಟೋಬರ್ 14 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ 72 ಗಂಟೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 48 ಗಂಟೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.