ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದೆ ಎಂದು ಹೇಳಿದೆ.
ಎಲ್ಲೆಲ್ಲಿ ಸಾಧಾರಣ ಮಳೆ?: ಕೊಡಗು, ತುಮಕೂರು, ಹಾಸನ, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬೀದರ್, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲವೆಡೆ ಮಾತ್ರ ಭಾರೀ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ : ನೈಋತ್ಯ ಮುಂಗಾರು ಕಳೆದ ಎರಡು ವಾರಗಳಿಂದ ದುರ್ಬಲಗೊಂಡು ವಾಡಿಕೆಗಿಂತ ಶೇ.32.7ರಷ್ಟು ಕಡಿಮೆ ಮಳೆಯಾಗಿದೆ. ಜೂನ್ 1ರಿಂದ ರಾಜ್ಯದ ದಕ್ಷಿಣ ಒಳನಾಡು ಹೊರತುಪಡಿಸಿ ಉಳಿದೆಲ್ಲ ಭಾಗಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ ಎಂದು ಹೇಳಿದೆ.
ಉತ್ತರ ಒಳನಾಡಿನಲ್ಲೂ ಶೇ.13ರಷ್ಟು ಕಡಿಮೆ ಮಳೆಯಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಕ್ರಮವಾಗಿ ಶೇ.59 ಹಾಗೂ ಶೇ.64ರಷ್ಟು ಮಳೆ ಕೊರತೆ ಕಂಡು ಬಂದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಬೆಂಗಳೂರು ಮೆಟ್ರೋ 3ನೇ ಹಂತದ ಯೋಜನೆಗೆ ನೀಲನಕ್ಷೆ ಸಿದ್ಧ