ETV Bharat / state

ಮುಂಗಾರು ಮಳೆ ಅಬ್ಬರ.. 4 ದಿನ ರಾಜ್ಯದಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ - Heavy rain is likely across Karnataka

ಇಂದಿನಿಂದ ಜುಲೈ 5ರ ವರೆಗೆ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

heavy-rain-is-likely-across-karnataka
ನೈಋತ್ಯ ಮುಂಗಾರಿನ ಅಬ್ಬರ, ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ...
author img

By

Published : Jul 2, 2022, 5:05 PM IST

ಬೆಂಗಳೂರು: ನೈಋತ್ಯ ಮುಂಗಾರು ಚುರುಕೊಂಡಿದ್ದು ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಜುಲೈ 5ರ ವರೆಗೆ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿಯಲ್ಲಿಯೂ ಮಳೆ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಪ್ಪಳ, ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕರ್ನಾಟಕದಲ್ಲೂ ಭಾರಿ ಮಳೆ : ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಓದಿ : ಚಾಮರಾಜನಗರದ ಜಮೀನಿನಲ್ಲಿ ಕ್ವಿಂಟಾಲ್ ತೂಕದ ಹೆಬ್ಬಾವು ಸೆರೆ- ಟ್ರ್ಯಾಕ್ಟರ್​ನಲ್ಲಿ ಕಾಡಿಗೆ ರವಾನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.