ETV Bharat / state

ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ.. ಹವಾಮಾನ ಇಲಾಖೆ ಮುನ್ಸೂಚನೆ - Bangalore

ರಾಜ್ಯದ ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಗರಿಷ್ಟ 4 ಸೆ. ಮೀ ಮಳೆಯಾಗಿದೆ. ಉಳಿದಂತೆ ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ 2 ಸೆ.ಮೀ ಮಳೆಯಾಗಿದೆ..

Bangalore
ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್
author img

By

Published : Mar 29, 2021, 8:40 PM IST

ಬೆಂಗಳೂರು : ಕರ್ನಾಟಕ ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ರಾಜ್ಯದ ಹವಾಮಾನದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಸಂಜೆ ಮತ್ತು ನಾಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಕಂಡು ಬರುತ್ತಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇಂದು ಸಂಜೆ ಮಳೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.

Bangalore
ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್

ಬೆಂಗಳೂರು ನಗರದಲ್ಲಿ ತಾಪಮಾನ ಹೆಚ್ಚಾಗಲಿದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಹಾಗು ಕನಿಷ್ಠ ಉಷ್ಣಾಂಶ 21 ಡಿಗ್ರಿ ಮುಂದಿನ ವಾರದಲ್ಲಿ ದಾಖಲಾಗುವ ಸಾಧ್ಯತೆ ಇದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಗರಿಷ್ಟ 4 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂಟಿ ಮೀಟರ್, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ 2 ಸೆ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.6 ಡಿಗ್ರಿ ದಾಖಲಾಗಿದೆ. ರಾಯಚೂರಿನಲ್ಲಿ 39 ಡಿಗ್ರಿ , ವಿಜಯಪುರದಲ್ಲಿ 38.5 , ಬೀದರ್ ನಲ್ಲಿ 37.6, ಕೊಪ್ಪಳದಲ್ಲಿ 37.5, ಮಂಡ್ಯದಲ್ಲಿ 36.6, ದಾವಣಗೆರೆಯಲ್ಲಿ 36 ಮತ್ತು ಬೆಂಗಳೂರಿನಲ್ಲಿ 34 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಮಾರ್ಚ್ 31ರಿಂದ ಏಪ್ರಿಲ್ 2ರವರೆಗೆ ಒಣ ಹವೆ ಮುಂದುವರೆಯಲಿದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದರು.

ಓದಿ: ಭಾರಿ ಮಳೆ ತಂದ ಅವಾಂತರ: ಪ್ರವಾಹದಲ್ಲಿ ನಾಲ್ವರ ಮೃತದೇಹ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.