ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೊಬರ್ 22ರವರೆಗೆ ಭಾರಿ ಮಳೆಯಾಗಲಿದೆ. ನೈಋತ್ಯ ಮುಂಗಾರು ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಲಿದೆ ಕರಾವಳಿಯ ಹಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ಹಾವೇರಿ, ರಾಮನಗರದಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ.
ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಇರಲಿದ್ದು, ಭಾರಿ ಮಳೆಯಾಗುವ ನೀರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.
ನಗರದಲ್ಲಿ ತೀವ್ರ ಮಳೆ:
ಬೆಂಗಳೂರು ನಗರದಲ್ಲಿ ತೀವ್ರ ಮಳೆಯಾಗಿದ್ದು, ಮುಂದುವರೆಯುವ ನಿರೀಕ್ಷೆಯಿದೆ. ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ 29 ಡಿಗ್ರಿ ಗರಿಷ್ಠ ಉಷ್ಣಾಂಶ ಹಾಗೂ 21 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದಿದೆ.
ಇದನ್ನೂ ಓದಿ: ಮಹಾನಗರಗಳಲ್ಲಿ ಗಗನಕ್ಕೇರಿದ ಟೊಮೇಟೊ ಬೆಲೆ: ಕೆಜಿಗೆ 93 ರೂ.