ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಲಿದೆ. ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಹಗುರ ಮಳೆಯಾಗಲಿದೆ. ಡಿಸೆಂಬರ್ 8, 9 ಮತ್ತು 10ರಂದು ಗುಡುಗು ಸಹಿತ ವ್ಯಾಪಕ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಸದ್ಯ ವಾತಾವರಣ ಸಹಜ ಸ್ಥಿತಿಯಲ್ಲಿದೆ. ಡಿಸೆಂಬರ್ 7 ವರೆಗೆ ಚಳಿ ಮುಂದುವರಿಯಲಿದೆ. ಬೆಳಗ್ಗೆ ದಟ್ಟ ಮಂಜು ಇರಲಿದೆ. ಡಿಸೆಂಬರ್ 7 ರಿಂದ 10ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ: ಇಟಲಿಯಲ್ಲಿ ಭಾರಿ ಮಳೆ: ಭೂಕುಸಿತಕ್ಕೆ ಏಳು ಮಂದಿ ಬಲಿ