ETV Bharat / state

ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ - ಕರ್ನಾಟಕ ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆ ಮುನ್ಸೂಚನೆ
ಭಾರಿ ಮಳೆ ಮುನ್ಸೂಚನೆ
author img

By

Published : Oct 1, 2022, 1:46 PM IST

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 1 ಹಾಗೂ 2 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ: ಸಿಲಿಕಾನ್ ಸಿಟಿಯಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(ಓದಿ: ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ.. ಹಗ್ಗ ಹಿಡಿದು ಹಳ್ಳ ದಾಟುತ್ತಿರುವ ಶಾಲೆ ಮಕ್ಕಳು, ರೈತರು)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.