ETV Bharat / state

ರಾಜ್ಯಾದ್ಯಂತ ಭಾನುವಾರವೂ ರಜೆ ಕೊಡದ ಮಳೆರಾಯ : ಕರಾವಳಿಯಲ್ಲಿ ಭಾರಿ ಮಳೆ, 'ಹೈ-ಕ' ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ - State weather news 2021

ಕರಾವಳಿ ಜಿಲ್ಲೆಯಲ್ಲಿ ಜೂನ್ 27ರಿಂದ ಜುಲೈ 1ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಜೂನ್ 27 ಮತ್ತು 28 ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜೂನ್ 29ರಿಂದ ಜುಲೈ 1 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

rain
ಮಳೆ
author img

By

Published : Jun 27, 2021, 4:36 PM IST

ಬೆಂಗಳೂರು : ರಾಜ್ಯಾದ್ಯಂತ ಭಾನುವಾರವೂ ರಜೆ ಕೊಡದ ಮಳೆರಾಯ ಎಲ್ಲೆಡೆ ವ್ಯಾಪಕವಾಗಿ ಸುರಿದಿದ್ದಾನೆ. ನಗರದಲ್ಲೂ ಬೆಳಗಿನಿಂದ ಮೋಡ ಕವಿದ ವಾತಾವರಣವಿದೆ. ಸಂಜೆಯ ನಂತರ ಮಳೆಯಾಗುವ ಸಾಧ್ಯತೆ ಕಂಡು ಬರುತ್ತಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹವಾಮಾನ ಸ್ಥಿಗತಿಗಳ ಬಗ್ಗೆ ಮಾಹಿತಿ ನೀಡಿದ್ದು, ಮುಖ್ಯವಾಗಿ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ 14 ಸೆಂ.ಮೀ, ಮುದುಗಲ್ 7, ಕಾರ್ಕಳ ಮತ್ತು ದಾವಣಗೆರೆಯಲ್ಲಿ 6 ಸೆಂ.ಮೀ ಇಂದು ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿದರು

ಕರಾವಳಿ ಜಿಲ್ಲೆಯಲ್ಲಿ ಜೂನ್ 27ರಿಂದ ಜುಲೈ 1ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಜೂನ್ 27 ಮತ್ತು 28 ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜೂನ್ 29ರಿಂದ ಜುಲೈ 1ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.

ಹೈದರಾಬಾದ್ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳವರೆಗೆ ಎಲ್ಲೋ ಅಲರ್ಟ್ ಫೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 1ರವರೆಗೆ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಓದಿ: ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಡ್ರೈ ಪ್ರೂಟ್ಸ್ ಮೊರೆ ಹೋದ ತುಮಕೂರಿಗರು...

ETV Bharat Logo

Copyright © 2024 Ushodaya Enterprises Pvt. Ltd., All Rights Reserved.