ಬೆಂಗಳೂರು: ನಗರದಲ್ಲಿ ಕಳೆದ ಮೂರು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಬುಧವಾರವೂ ಮುಂದುವರೆದಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆಗೆ ನಗರದಲ್ಲಿ ಮಳೆ ಸುರಿಯಿತು. ಕೆಲವು ಬಡಾವಣೆಗಳು ಜಲಾವೃತಗೊಂಡಿವೆ.
ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದೆ. ಬಿಳೇಕಹಳ್ಳಿ, ಬೊಮ್ಮನಹಳ್ಳಿ ಭಾಗದ ರಸ್ತೆಗಳು ಕೆರೆಗಳಾಗಿ ಮಾರ್ಪಟ್ಟಿದ್ದವು. ಬನ್ನೇರುಘಟ್ಟ ಮುಖ್ಯರಸ್ತೆ, ಮಹದೇವಪುರ ಹಾಗೂ ಬೆಳ್ಳಂದೂರಿನ ಕೆಲ ಬಡಾವಣೆಗಳು ಮಳೆ ನೀರಿನಲ್ಲಿ ತೊಯ್ದು ಹೋಗಿವೆ. ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಗಾಂಧಿ ಬಜಾರ್, ಜೆಪಿ ನಗರ, ರಾಜಾಜಿನಗರ, ಮಲ್ಲೇಶ್ವರ, ಬಸವೇಶ್ವರ ನಗರ, ಕುರುಬರಹಳ್ಳಿ ಸೇರಿ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ರಸ್ತೆಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.
175 ಮಿ.ಮೀಟರ್ಗಿಂತ ಹೆಚ್ಚು ಮಳೆ: ಈ ವರ್ಷ ಇಲ್ಲಿಯವರೆಗೆ ನಗರದಲ್ಲಿ 175 ಮಿ.ಮೀಟರ್ಗಿಂತ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಬೈಕ್, ಸವಾರನ ರಕ್ಷಣೆ