ETV Bharat / state

ಜುಲೈ 26ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - ಹವಾಮಾನ ಇಲಾಖೆ ವರದಿ

ಕರಾವಳಿ ಜಿಲ್ಲೆಗಳಲ್ಲಿ ಜುಲೈ 23ರಿಂದ 26ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rain in Karnataka until 26th july
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
author img

By

Published : Jul 22, 2021, 9:33 PM IST

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಬಂಗಾಳ ಉಪಸಾಗರ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 23ರಿಂದ 26ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿರುವುದು

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 23ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 24, 25 ಹಾಗೂ 26ರಂದು ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡುಗು ಜಿಲ್ಲೆಗಳ ಕೆಲವೆಡೆ ಭಾರಿ ಹಾಗೂ ಅತಿಭಾರಿ ಮಳೆಯನ್ನು ನಿರೀಕ್ಷಿಸಲಾಗಿದ್ದು, ಜುಲೈ 23ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 24, 25ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 23ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕದ ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ.

ಮುಖ್ಯವಾಗಿ ಉತ್ತರ ಕನ್ನಡದ ಜಗಲ್ಬೇಟ್‌ನಲ್ಲಿ 19 ಸೆಂ.ಮೀ, ಸೋಮವಾರಪೇಟೆ, ಕೊಡಗಿನ ಭಾಗಮಂಡಲದಲ್ಲಿ ತಲಾ 11 ಸೆಂ.ಮೀ, ಬೆಳಗಾವಿಯ ನಿಪ್ಪಾಣಿಯಲ್ಲಿ 9 ಸೆಂ.ಮೀ, ಹಾಸನದ ಸಕಲೇಶಪುರ, ಆಗುಂಬೆಯಲ್ಲಿ ತಲಾ 10 ಸೆಂ.ಮೀ, ಬೆಳಗಾವಿಯ ನಿಪ್ಪಾಣಿ, ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ, ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ತಲಾ 9 ಸೆಂ.ಮೀ, ಹಾಸನದ ಬಲ್ಲುಪೇಟೆ ಚಿಕ್ಕಮಂಗಳೂರಿನ ಕೊಟ್ಟಿಗೇಹಾರ, ತಾಳಗುಪ್ಪದಲ್ಲಿ 8 ಸೆಂ.ಮೀ, ಉತ್ತರ ಕನ್ನಡದ ಮಂಚಿಕೆರೆಯಲ್ಲಿ 6 ಸೆಂ.ಮೀ, ಯಲ್ಲಾಪುರ, ಶಿರಾಲಿ, ಜನ್ಮನೆ, ಕಾರ್ಕಳ, ಸಂಕೇಶ್ವರ, ಚಿಕ್ಕೋಡಿ, ಅಜ್ಜಂಪುರದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.