ಬೆಂಗಳೂರು: ರಾಜ್ಯವನ್ನು ಮುಂಗಾರು ಪ್ರವೇಶಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗುಸಹಿತ ಜೋರು ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಜೂನ್ 25 ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಕೋಲಾರ, ಹಾಸನ, ಚಾಮರಾಜನಗರ, ಕೊಡಗು, ಶಿವಮೊಗ್ಗ ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗುಸಹಿತ ಉತ್ತಮ ಮಳೆ ಮುನ್ಸೂಚನೆ ನೀಡಲಾಗಿದೆ.
ರಾಜಧಾನಿಯಲ್ಲಿ ಮಳೆ: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದ್ದು, ಎಲ್ಲೆಡೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು 11 ಸೆ.ಮೀ, ಉಡುಪಿ , ಮಂಕಿ (ಉತ್ತರ ಕನ್ನಡ ಜಿಲ್ಲೆ) 10 ಸೆ.ಮೀ, ಹೊನ್ನಾವರ, ಕೋಟದಲ್ಲಿ (ಉಡುಪಿ) ತಲಾ 8, ಕಾರವಾರ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ತಲಾ 7 ಸೆಮೀ ಮಳೆಯಾಗದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ.ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಬಾದಾಮಿಯಿಂದ ದೂರವಾದ ಸಿದ್ದರಾಮಯ್ಯ: ಸಚಿವ ಶ್ರೀರಾಮಲು