ETV Bharat / state

ಮುಂದುವರೆದ ಶಾಹೀನ್ ಚಂಡಮಾರುತ ಪ್ರಭಾವ : ಅಕ್ಟೋಬರ್​ 4 ರಿಂದ 2 ದಿನ ರಾಜ್ಯಾದ್ಯಂತ ಭಾರಿ ಮಳೆ - ಅಕ್ಟೋಬರ್​ 5 ರಿಂದ 2 ದಿನ ರಾಜ್ಯಾದ್ಯಂತ ಭಾರಿ ಮಳೆ

ಬುಧವಾರದಿಂದ ಗುಲಾಬ್ ಚಂಡಮಾರುತ ದುರ್ಬಲಗೊಂಡು ಅರಬ್ಬೀ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಬದಲಾಗಿದ್ದು, ಇನ್ನು ಹಲವು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇವೆಲ್ಲದರ ನಡುವೆ ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ಬಿರುಸಿನ ಮಳೆ ಸುರಿದರೂ ಸಹ ಈ ಬಾರಿ ರಾಜ್ಯದಲ್ಲಿ ಒಟ್ಟಾರೆಯಾಗಿ ಶೇ. 8 ರಷ್ಟು ಮಳೆ ಕೊರತೆಯೊಂದಿಗೆ ಮುಂಗಾರು ಅವಧಿ ಅಧೀಕೃತವಾಗಿ ಅಂತ್ಯವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ..

ಅಕ್ಟೋಬರ್​ 4 ರಿಂದ 2 ದಿನ ರಾಜ್ಯಾದ್ಯಂತ ಭಾರಿ ಮಳೆ

author img

By

Published : Oct 3, 2021, 10:39 PM IST

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಶಾಹೀನ್ ಚಂಡಮಾರುತ ಪ್ರಭಾವ ಬೀರಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.

ಸೋಮವಾರ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಅಲ್ಲದೇ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರಿನಲ್ಲೂ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಿಜಾಪುರ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಂಜೆಯಿಂದ ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದಿದ್ದು, ರಾತ್ರಿ ವೇಳೆಯೂ ಮುಂದುವರೆದಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ : ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಸಹ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ 2 ದಿನ ಭಾರೀ ಮಳೆಯ ನಿರೀಕ್ಷೆ ಇರುವುದರಿಂದ ಚಿಕ್ಕಮಗಳೂರು ಮತ್ತು ಕೊಡಗಿಗೆ ಅಕ್ಟೋಬರ್​ 4 ಮತ್ತು 5ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಮಧ್ಯ ಕರ್ನಾಟಕ ಮತ್ತು ತಮಿಳುನಾಡಿನ ಹೆಚ್ಚು ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 4 ಮತ್ತು 5 ರಂದು ಭಾರಿ ಮಳೆ ಸುರಿಯುವ ನಿರೀಕ್ಷೆ ಇರುವ ಕಾರಣ ಆರೆಂಜ್ ಅಲರ್ಟ್‌ನ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರಕ್ಕೆ ಅಕ್ಟೋಬರ್ 5ರಂದು ಯೆಲ್ಲೋ ಅಲರ್ಟ್‌ ನೀಡಿದೆ.

ರಾಜ್ಯದಲ್ಲಿ ಶೇ.8ರಷ್ಟು ಮಳೆ ಕೊರತೆ : ಬುಧವಾರದಿಂದ ಗುಲಾಬ್ ಚಂಡಮಾರುತ ದುರ್ಬಲಗೊಂಡು ಅರಬ್ಬೀ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಬದಲಾಗಿದ್ದು, ಇನ್ನು ಹಲವು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇವೆಲ್ಲದರ ನಡುವೆ ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ಬಿರುಸಿನ ಮಳೆ ಸುರಿದರೂ ಸಹ ಈ ಬಾರಿ ರಾಜ್ಯದಲ್ಲಿ ಒಟ್ಟಾರೆಯಾಗಿ ಶೇ. 8 ರಷ್ಟು ಮಳೆ ಕೊರತೆಯೊಂದಿಗೆ ಮುಂಗಾರು ಅವಧಿ ಅಧೀಕೃತವಾಗಿ ಅಂತ್ಯವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಆಗಸ್ಟ್‌ ತಿಂಗಳಿನಲ್ಲಿ ಶೇ. 47 ರಷ್ಟು ಮಳೆ ಕೊರತೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ. 8 ರಷ್ಟು ಮಳೆ ಕೊರತೆಯಾಗಿದೆ ಎಂದು ಹೇಳಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.