ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಇಂದು ಮತ್ತು ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಂತೆ ಇಂದು ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಬೆಳಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆ ಆರಂಭವಾಯಿತು. ಜಯನಗರ, ಹೆಬ್ಬಾಳ, ಮೈಸೂರು ರಸ್ತೆ, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್ ಸುತ್ತಮುತ್ತ ಸಂಜೆಯಿಂದ ಮಳೆಯಾಗುತ್ತಿದೆ.
ರಾಜ್ಯದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೊಡಗು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಕೂಡ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.