ಬೆಂಗಳೂರು: ರಾಜ್ಯದಲ್ಲಿ ಮೂರು ದಿನ ಮಳೆ ಅಬ್ಬರವಿರಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಎಲ್ಲ ಜಿಲ್ಲೆಗಳಿಗೂ ಇಂದು ಆರೆಂಜ್ ಅಲರ್ಟ್, ನಾಳೆ ರೆಡ್ ಅಲರ್ಟ್, ಆಗಸ್ಟ್ 6 ರಂದು ಮತ್ತೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಬುರಗಿ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ನಾಳೆ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದಿದೆ.
ಇಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ನಾಳೆ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಯೆಲ್ಲೋ ಅಲರ್ಟ್: ಮೂರು ದಿನಗಳ ಕಾಲ ಬೆಂಗಳೂರಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇಂದಿನಿಂದ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗರಿಷ್ಠ 29 ಕನಿಷ್ಠ 20 ಡಿಗ್ರಿ ತಾಪಮಾನವಿರಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಚಾಮರಾಜನಗರದಲ್ಲಿ ಮಳೆ ಅಬ್ಬರ: ಗ್ರಾಮಗಳ ಸಂಪರ್ಕ ಕಡಿತ, ಹೊಗೆನಕಲ್ ಜಲಪಾತ ಬಳಿ ಮೊಸಳೆ ದರ್ಶನ