ETV Bharat / state

5 ದಿನ ರಾಜ್ಯದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ - ಬೆಂಗಳೂರಿನಲ್ಲೂ ಭಾರೀ ಮಳೆ

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

5 ದಿನ ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​
Heavy rain to lash K'taka for 5 days, IMD issues yellow alert
author img

By

Published : Oct 19, 2022, 1:11 PM IST

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ವರ್ಷ ಬೆಂಗಳೂರಿನಲ್ಲಿ ದಾಖಲೆಯ 1,706 ಮಿಮೀ ಮಳೆಯಾಗಿದೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017 ರಲ್ಲಿ ರಾಜ್ಯ ರಾಜಧಾನಿಯಲ್ಲಿ 1,696 ಮಿಮೀ ಮಳೆಯಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ 24 ಗಂಟೆಯೊಳಗೆ ದಾಖಲೆಯ ಮಳೆ.. 1954 ರ ಬಳಿಕ ಇದೇ ಹೆಚ್ಚು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.