ETV Bharat / state

ಗುತ್ತಿಗೆದಾರರಿಂದ ಭಾರಿ ಪ್ರಮಾಣದ ತೆರಿಗೆ ವಂಚನೆ: ಐಟಿ ದಾಳಿಯಿಂದ ಬಯಲಾದ ಸತ್ಯ

ಗುತ್ತಿಗೆದಾರರು, ಉದ್ಯಮಿಗಳು, ಚಾರ್ಟೆಡ್ ಅಕೌಂಟೆಂಟ್‌ಗಳ ನಿವಾಸ, ಕಚೇರಿ ಮೇಲೆ ಐಟಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪತ್ತೆಯಾದ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದಾಗ ಕೋಟ್ಯಂತರ ರೂ. ಮೌಲ್ಯದ ತೆರಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ.

tax fraud
tax fraud
author img

By

Published : Oct 10, 2021, 12:37 PM IST

ಬೆಂಗಳೂರು: ಕರ್ನಾಟಕ-ಗೋವಾ ವಿಭಾಗದ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ರಾಜ್ಯಾದ್ಯಂತ ಗುತ್ತಿಗೆದಾರರು, ಉದ್ಯಮಿಗಳು, ಚಾರ್ಟೆಡ್ ಅಕೌಂಟೆಂಟ್‌ಗಳ ನಿವಾಸ, ಕಚೇರಿ ಮೇಲೆ ನಡೆಸಿರುವ ದಾಳಿಯಲ್ಲಿ ಪತ್ತೆಯಾದ ಮಹತ್ವದ ದಾಖಲೆ ಪರಿಶೀಲಿಸಿದಾಗ ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗೆ ದೊಡ್ಡ ಪ್ರಮಾಣದಲ್ಲಿ ತೆರಿಗೆ ವಂಚಿಸಿರುವುದು ಕಂಡುಬಂದಿದೆ.

ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಇಂದೂ ಸಹ ದಾಳಿ ಮುಂದುವರೆಸಿದ್ದು, ಗುತ್ತಿಗೆದಾರರ ಮನೆ, ಕಚೇರಿಯಲ್ಲಿ ಜಪ್ತಿ ಮಾಡಿದ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಆಸ್ತಿಗೆ ಜಲಸಂಪನ್ಮೂಲ ಇಲಾಖೆಯ ಕೆಲ ಯೋಜನೆಗಳಲ್ಲಿ ಟೆಂಡರ್‌ ಪಡೆದ ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬಳಿಕ ಆ ಹಣವನ್ನು ವಿವಿಧ ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದರು. ಈ ವೇಳೆ ಲೆಕ್ಕಪರಿಶೋಧಕರ ಸಹಾಯ ಪಡೆದು ತಪ್ಪು ಲೆಕ್ಕ ತೋರಿಸಿ, ದೊಡ್ಡ ಪ್ರಮಾಣದಲ್ಲಿ ತೆರಿಗೆ ವಂಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮುಂದುವರೆದ ಐಟಿ ರೇಡ್: ಪ್ರಭಾವಿ ಕುಳಗಳಿಗೆ ಜಾರಿ ನಿರ್ದೇಶನಾಲಯದ ಭಯ ಆರಂಭ

ಇನ್ನು ಜಪ್ತಿ ಮಾಡಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ಬೆಳಕಿಗೆ ಬರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಗುತ್ತಿಗೆದಾರರಾದ ಡಿ.ವೈ. ಉಪ್ಪಾರ, ಸೋಮಶೇಖರ್, ಜಯಶೀಲ ಶೆಟ್ಟಿ, ಶ್ರೀನಿವಾಸ್, ರಾಹುಲ್ ಎಂಟರ್‌ಪ್ರೈಸಸ್ ಮಾಲೀಕ ಅರವಿಂದ್, ಲಕ್ಷ್ಮೀಕಾಂತ್, ಚಾರ್ಟೆಡ್ ಅಕೌಂಟೆಂಟ್ ಅಮಲಾ ನಿವಾಸ ಮತ್ತು ಕಚೇರಿಯಲ್ಲಿ ಸಾಕಷ್ಟು ದಾಖಲೆಗಳು ಸಿಕ್ಕಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.