ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಆರಂಭಿಸಲಾಗುತ್ತಿದೆ.
ಈ ಸಹಾಯವಾಣಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧಪಡಿಸುತ್ತಿರುವ ಹಲವು ತಂತ್ರಜ್ಞಾನ ಆಧಾರಿತ ಯೋಜನೆಗಳ ಭಾಗವಾಗಿ ಶಿಕ್ಷಕರ, ವಿದ್ಯಾರ್ಥಿಗಳ ಸಮಸ್ಯೆಗಳ ನಿವಾರಣೆಗೆ ಅಗತ್ಯ ಪರಿಹಾರ ಸೂಚಿಸುವ ಒಂದು ಪ್ರಮುಖ ವೇದಿಕೆಯಾಗುವಂತೆ ಸಿದ್ಧಗೊಳ್ಳಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ಇದೇ ಮಾರ್ಚ್ ಅಂತ್ಯದೊಳಗೆ ಸಹಾಯವಾಣಿ ರೂಪುರೇಷೆಗಳ ಸಿದ್ಧತೆ ಪೂರ್ಣಗೊಳಿಸಲಾಗುತ್ತದೆ. ಶಿಕ್ಷಕರು, ವಿದ್ಯಾರ್ಥಿಗಳು ಅವರ ದೂರುಗಳು, ಸಮಸ್ಯೆಗಳಿದ್ದಲ್ಲಿ ತಿಳಿಸಬಹುದಾಗಿದೆ ಎಂದು ಅವರು ತಿಳಿಸಿದರು.