ಬೆಂಗಳೂರು: ಹಿಜಾಬ್ ಸಂಬಂಧ ಇಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸರು ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಕುರಿತು ವಿಚಾರಣೆ ನಡೆಯುತ್ತಿದ್ದು, ಇಂದು ತೀರ್ಪು ಹೊರಬೀಳುವ ಸಾಧ್ಯತೆ ಇದೆ. ತೀರ್ಪಿನ ಬಳಿಕ ಪ್ರತಿಭಟನೆ ಅಥವಾ ಸಂಭ್ರಮಾಚರಣೆ ಮಾಡುವ ಸಾಧ್ಯತೆಯಿಂದ ನಗರದ ಅತಿ ಸೂಕ್ಷ್ಮ ಪ್ರದೇಶವಾಗಿರುವ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಹಲವೆಡೆ ಸೂಕ್ತ ಭದ್ರತೆ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರು ಹಾಗೂ ಎಲ್ಲಾ ವಲಯದ ಡಿಸಿಪಿಗಳಿಗೆ ಸೂಚಿಸಿದ್ದಾರೆ.
(ಓದಿ: ಕೇರಳಕ್ಕೂ ಕಾಲಿಟ್ಟ ಹಿಜಾಬ್ ವಿವಾದ.. ಸಮವಸ್ತ್ರ ಧರಿಸಲು ಸೂಚಿಸಿದ ಶಾಲೆಯ ವಿರುದ್ಧ ಪ್ರತಿಭಟನೆ)
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆದಿದ್ದು, ಇಂದು ತೀರ್ಪು ಪ್ರಕಟವಾಗಲಿದೆ.
(ಓದಿ: ಹಿಜಾಬ್, ಬುರ್ಕಾ ತೆಗೆದಿರಿಸಿ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು)