ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯದ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆಯ ಮೇರೆಗೆ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು, ಮಂಗಳೂರು ಕಮಿಷನರ್ ಡಾ. ಪಿ ಎಸ್ ಹರ್ಷ ಅವರಿಗೆ ಕರೆಮಾಡಿ, ಎಲ್ಲಾ ರೀತಿಯಲ್ಲೂ ಅಲರ್ಟ್ ಆಗಿರುವಂತೆ ಆದೇಶ ಕೊಟ್ಟಿದ್ದಾರೆ.
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಜಿಹಾದಿಗಳ ಸಂಚು ಹಾಗೂ ಪೌರತ್ವ ಕಿಚ್ಚು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಈಗಾಗ್ಲೇ ಹೈ-ಅಲರ್ಟ್ ಆಗಿದೆ. ಆದರೆ, ನಾಳೆ ಸಿಎಎ ಹಾಗೂ ಎನ್‌ಆರ್‌ಸಿ ಕಾನೂನುಗಳನ್ನ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಆದರೆ, ಇತ್ತೀಚೆಗೆ ಜಿಹಾದಿಗಳ ಬಂಧನ ಬೆನ್ನಲ್ಲೇ ಮಂಗಳೂರಿನಲ್ಲಿ ಗಲಭೆಯಾಗುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ.
ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡಿಯಬಾರದು ಅನ್ನೋ ದೃಷ್ಟಿಯಿಂದ ಅಡ್ಯಾರ್ ಬಳಿ ಇರುವ ಗಾರ್ಡನ್ ಮೈದಾನದಲ್ಲಿ ಭದ್ರತೆ ದೃಷ್ಟಿಯಿಂದ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಈಗಾಗಲೇ ಮಂಗಳೂರಿನಲ್ಲೇ ಗುಪ್ತದಳ ಹಾಗೂ ಐಎಸ್ಡಿ ತಂಡ ಬೀಡು ಬಿಟ್ಟಿದೆ.