ETV Bharat / state

ಸಿಇಟಿ ಬಿಕ್ಕಟ್ಟು: ಸರ್ಕಾರದ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್

2020-21ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಪುನರಾವರ್ತಿತರ ದ್ವಿತೀಯ ಪಿಯುಸಿ ಪರೀಕ್ಷೆ ಅಂಕಗಳ ಪರಿಗಣನೆ ಸಂಬಂಧ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್​​ ಸೋಮವಾರಕ್ಕೆ ಮುಂದೂಡಿದೆ.

high-court-adjourned-hearing-of-govt-petition-on-cet-issue
ಸಿಇಟಿ ಬಿಕ್ಕಟ್ಟು : ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್
author img

By

Published : Sep 15, 2022, 8:54 PM IST

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ2020-21ರ ಪುನರಾವರ್ತಿತರ ದ್ವಿತೀಯ ಪಿಯುಸಿ ಪರೀಕ್ಷೆ ಅಂಕಗಳನ್ನು ಪರಿಗಣಿಸುವಂತೆ ಹೈಕೋರ್ಟ್​ ಏಕ ಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆಯನ್ನು ವಿಭಾಗೀಯ ಪೀಠವು ಸೋಮವಾರಕ್ಕೆ ಮುಂದೂಡಿದೆ.

ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್​ ಆರಾಧೆ ಅವರಿದ್ದ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಪರಿಹರಿಸಲು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

2020-21ನೇ ಸಾಲಿನಲ್ಲಿ ಪಿಯು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೇ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಆದರೆ, ಅವರ ಅಂಕಗಳನ್ನು ಸಿಇಟಿಯಲ್ಲಿ ಪಡೆದುಕೊಂಡಲ್ಲಿ ಸಿಇಟಿಯಲ್ಲಿ ಹೆಚ್ಚು ರ‍್ಯಾಂಕ್​ ಸಿಗಲಿದೆ. ಇದರಿಂದ 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗ ಆವರಿಸಿದ್ದ ಕಾರಣದಿಂದ 2020-21ನೇ ಸಾಲಿನಲ್ಲಿ ಪಿಯುಸಿ ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳನ್ನು 2021-22ನೇ ಸಾಲಿನ ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಟಿಪ್ಪಣಿ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಈಶ್ವರ್​.ಆರ್. ಸೇರಿ ಮತ್ತಿತರರು ಹೈಕೋರ್ಟ್​ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಕೆಇಎ ಟಿಪ್ಪಣಿಯನ್ನು ರದ್ದುಪಡಿಸಿತ್ತು.

ಅಲ್ಲದೆ, ಪುನರಾವರ್ತಿತ​ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50ರಷ್ಟು ಅಂಕ ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ. 50ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್​ ಈ ತೀರ್ಪಿನಲ್ಲಿ ತಿಳಿಸಿತ್ತು.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಬಗ್ಗೆ ಸಿಎಜಿ ವರದಿ ವಿವರಣೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.