ಬೆಂಗಳೂರು: ಮೊಬೈಲ್ ಅ್ಯಪ್ ಆಧಾರಿತ ಓಲಾ, ಉಬರ್ ಸೇವೆಗಳಲ್ಲಿ ಆಟೋಗಳ ಬಳಕೆಗೆ ದರ ನಿಗದಿಗೆ ಕುರಿತ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 5ಕ್ಕೆ ಮುಂದೂಡಿದೆ.
ಓಲಾ, ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಲು ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ ಸರ್ಕಾರ ಬೆಲೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಸಲ್ಲಿಸಿದರು. ಇದನ್ನು ಪರಿಶೀಲಿಸಿದ ನ್ಯಾಯಪೀಠವು ವಿಚಾರಣೆ ಮುಂದೂಡಿದೆ.
ಸರ್ಕಾರದ ಆದೇಶದಲ್ಲೇನಿದೆ?: ಓಲಾ, ಉಬರ್, ರಾಪಿಡೋ ಆಟೋಗಳಲ್ಲಿ ಸಾಮಾನ್ಯ ದರಕ್ಕಿಂತ ಶೇ.5ರಷ್ಟು ಸೇವಾ ಶುಲ್ಕ ಮತ್ತು ಜಿಎಸ್ಟಿ ಶುಲ್ಕವನ್ನು ಸೇರಿಸಿ ಪಡೆದುಕೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಈ ಅಂಶವನ್ನು ನ್ಯಾಯಪೀಠ ಪರಿಶೀಲನೆ ನಡೆಸಿ ವಿಚಾರಣೆಯನ್ನು ಮುಂದೂಡಿತು.
ಇದನ್ನೂ ಓದಿ: ಶಿವಸೇನೆ ವಕ್ತಾರ ಸಂಜಯ್ ರಾವತ್ಗೆ ಬೆಳಗಾವಿ ಕೋರ್ಟ್ನಿಂದ ಸಮನ್ಸ್