ETV Bharat / state

ಪಿಎಸ್ಐ ನೇಮಕಾತಿ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - etv bharat kannada

ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್​ಐ ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.

high-court-adjourned-hearing-on-psi-recruitment-re-exam
ಪಿಎಸ್ಐ ನೇಮಕಾತಿ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
author img

By

Published : Oct 10, 2022, 8:48 PM IST

ಬೆಂಗಳೂರು: ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ 454 ಪೊಲೀಸ್ ಸಬ್ ಇನ್ಸ್​​ಪೆಕ್ಟರ್ ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಅ.19ರವರೆಗೆ ವಿಸ್ತರಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠದ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಅಭ್ಯರ್ಥಿಗಳ ಪೈಕಿ ಒಬ್ಬ ವಕೀಲರು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆಯನ್ನು ಅ.19ಕ್ಕೆ ಮುಂದೂಡಿತು.

ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿಯನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಪಿಎಸ್​ಐ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಪಿಎಸ್​ಐ ಹಗರಣ : ಅಮೃತ್ ಪಾಲ್ ಡಬಲ್‌ ಝೀರೋ ಕೋಡ್ ವರ್ಡ್​ ಭೇದಿಸಿದ ಸಿಐಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.