ETV Bharat / state

ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ಡಿ.16ಕ್ಕೆ ಮುಂದೂಡಿದ ಹೈಕೋರ್ಟ್ - High Court

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧನವಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್​ ಡಿ.16ಕ್ಕೆ ಮುಂದೂಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Dec 13, 2022, 12:49 PM IST

ಬೆಂಗಳೂರು: ಮುರುಘಾ ಮಠದ ಅಧೀನದ ಶಾಲೆಯ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ, ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶ್ರೀ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 16ಕ್ಕೆ ಮುಂದೂಡಿದೆ.

ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಏಕಸದಸ್ಯ ಪೀಠ ನಡೆಸಿತು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ಇದನ್ನೂ ಓದಿ: ಮೂರು ದಿನಗಳ ಕಾಲ ಮುರುಘಾ ಶ್ರೀ ‌‌ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರ್ಟ್​ ಆದೇಶ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ಪ್ರಕರಣ ಸಂಬಂಧ ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಈ ನಿಟ್ಟಿನಲ್ಲಿ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಆದ್ದರಿಂದ ಅರ್ಜಿದಾರರೊಂದಿಗೆ ಚರ್ಚೆ ನಡೆಸುವುದಕ್ಕೆ ಅವಕಾಶ ಕೋರಿದರು. ಇದಕ್ಕೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.

ವಕಾಲತ್ತಿಗೆ ಆಕ್ಷೇಪ: ಸಂತ್ರಸ್ತ ಬಾಲಕಿಯರ ಪರ ಎನ್‌ಜಿಒ ವಕೀಲರ ವಕಾಲತ್ತು ಸಲ್ಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಪೋಷಕರ ಮೇಲೆ ಬಾಲಕಿಯರಿಗೆ ವಿಶ್ವಾಸ ಇಲ್ಲದಿದ್ದಲ್ಲಿ ನ್ಯಾಯಾಲಯವೇ ವಕೀಲರನ್ನು ನೇಮಕ ಮಾಡಲಿ. ಆದರೆ, ಎನ್​ಜಿಒ ವಕೀಲರ ವಕಾಲತಿಗೆ ಅವಕಾಶವಿಲ್ಲವೆಂದು ಎಂದು ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೂರ್ತಿ ಶರಣರನ್ನು ಪೊಲೀಸರು 2022ರ ಸೆ.1ರಂದು ಬಂಧಿಸಿದ್ದರು. ಅಂದಿನಿಂದ ಈವರೆಗೂ ಅವರು ನ್ಯಾಯಾಂಗ ಬಂಧನಲ್ಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.