ETV Bharat / state

ಚಿಕ್ಕಬಳ್ಳಾಪುರದಲ್ಲಿ ಆದಿಯೋಗಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೈಕೋರ್ಟ್ ಅವಕಾಶ - ಈಶಾ ಪ್ರತಿಷ್ಠಾನ

ಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಷ್ಠಾಪನೆ ಕಾರ್ಯಕ್ರಮ ಪೂರ್ವ ನಿಗದಿತವಾಗಿದೆ. ಇದಕ್ಕೆ ಅಡ್ಡಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು.

ಹೈಕೋರ್ಟ್
ಹೈಕೋರ್ಟ್
author img

By

Published : Jan 13, 2023, 11:56 AM IST

Updated : Jan 13, 2023, 3:13 PM IST

ಬೆಂಗಳೂರು: ಈಶಾ ಪ್ರತಿಷ್ಠಾನದ ವತಿಯಿಂದ ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡುವ ಪೂರ್ವನಿಯೋಜಿತ ಕಾರ್ಯಕ್ರಮಕ್ಕೆ ಹೈಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಆದರೆ, ಯಾವುದೇ ಕಾಮಗಾರಿ ನಡೆಸದಂತೆ ಈ ಹಿಂದೆ ನೀಡಿದ್ದ ಯತಾಸ್ಥಿತಿ ಮುಂದುವರೆಯಲಿದೆ ಎಂದು ತಿಳಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್ ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹಾಜರಾಗಿದ್ದ ಈಶಾ ಪ್ರತಿಷ್ಠಾನದ ಪರ ಹಿರಿಯ ವಕೀಲರ ಉದಯ್ ಹೊಳ್ಳ, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆಹ್ವಾನ ಪತ್ರಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಅಲ್ಲದೆ, ಉಪರಾಷ್ಟ್ರಪತಿ ಸೇರಿದಂತೆ ಮತ್ತಿತರ ಗಣ್ಯರು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮವು ಪೂರ್ವನಿಯೋಜಿತವಾದಂತೆ ಜನವರಿ 15ರಂದು ನಡೆಯಲಿದೆ ಎಂದು ವಿವರಿಸಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಈಶಾ ಪ್ರತಿಷ್ಠಾನದ ಪರ ವಕೀಲರು ಅರ್ಜಿಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಆಕ್ಷೇಪಣೆ ಸಲ್ಲಿಸಿದ್ದಾರೆ.

ಗಣ್ಯರನ್ನು ಈಗಾಗಲೇ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಅಗತ್ಯ ಇರುವುದನ್ನು ಹೊರತುಪಡಿಸಿ ಯಾವುದೇ ರೀತಿಯಲ್ಲಿಯೂ ಅರಣ್ಯ ಮತ್ತು ವನ್ಯ ಜೀವಿಗಳಿಗೆ ಹಾನಿ ಅಥವಾ ಕಾಮಗಾರಿ ನಡೆಸುವುದಿಲ್ಲ ಎಂಬ ವಾಗ್ದಾನವನ್ನು ಈಶಾ ಪರ ವಕೀಲರು ನೀಡಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಆದರೆ, ಪರಿಸರಕ್ಕೆ ಹಾನಿಯಾಗುವಂತಹ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳದಂತೆ ಜನವರಿ 11ರಂದು ಮಾಡಿರುವ ಆದೇಶವು ಜನವರಿ 15ರಂದು ನಡೆಸಲಿರುವ ಕಾರ್ಯಕ್ರಮಕ್ಕೆ ಅಡ್ಡಿಯಾಗುವುದಿಲ್ಲ. ಉಳಿದಂತೆ ಯಥಾಸ್ಥಿತಿ ಮುಂದುವರೆಯಲಿದೆ ಎಂದು ತಿಳಿಸಿದ ಪೀಠವು ವಿಚಾರಣೆಯನ್ನು ಫೆಬ್ರವರಿ 2ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಪ್ರಕರಣ ಸಂಬಂಧ ಅರ್ಜಿದಾರರು ನೈಜ ವಿಚಾರಗಳನ್ನು ಮರೆಮಾಚಿದ್ದಾರೆ. ಆದಿಯೋಗಿ ಮೂರ್ತಿಯು ನಂದಿ ಬೆಟ್ಟದಿಂದ 30 ಕಿ. ಮೀ ದೂರದಲ್ಲಿದೆ. ಜನವರಿ 15ರಂದು ಕಾರ್ಯಕ್ರಮ ನಡೆಸಲು ಈ ಹಿಂದೆಯೇ ನಿರ್ಣಯಿಸಲಾಗಿದೆ. ಕಾರ್ಯಕ್ರಮದಲ್ಲಿ ಅತ್ಯುನ್ನತ ಗಣ್ಯರು ಭಾಗವಹಿಸುತ್ತಿದ್ದು, ಅವರ ಅನುಕೂಲ ಆಧರಿಸಿ ಕಾರ್ಯಕ್ರಮ ನಿಯೋಜಿಸಲಾಗಿದೆ. ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಭಾಗವಹಿಸಲು ಗಣ್ಯರ ಅನುಮತಿ ಮತ್ತು ಒಪ್ಪಿಗೆ ಪಡೆಯಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಅರ್ಜಿಯಲ್ಲಿನ ಕೆಲವು ಅಂಶಗಳನ್ನು ಪರಿಗಣಿಸಬೇಕಿದೆ. ಉಪರಾಷ್ಟ್ರಪತಿ ಸೇರಿದಂತೆ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದು ತಾವು ತಿಳಿಸಿದ್ದೀರಿ. ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವವರಿಗೆ ತಪ್ಪು ಸಂದೇಶ ರವಾನೆ ಆಗಬಾರದು ಎಂಬುದು ನಿಮ್ಮ ಕಳಕಳಿ. ನಿಯೋಜವಾಗಿರುವಂತೆ ಕಾರ್ಯಕ್ರಮ ನಡೆಯುವುದಕ್ಕೆ ನಾವು ಅನುಮತಿಸುತ್ತೇವೆ. ಈ ವಿಚಾರದಲ್ಲಿ ಕಳೆದ ವಿಚಾರಣೆಯಲ್ಲಿ ಮಾಡಿರುವ ಯಥಾಸ್ಥಿತಿ ಕಾಪಾಡುವ ಆದೇಶ ಅನ್ವಯಿಸುವುದಿಲ್ಲ. ಉಳಿದಂತೆ ಮಧ್ಯಂತರ ಆದೇಶ ಮುಂದುವರೆಯಲಿದೆ ಎಂದು ತಿಳಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಉದ್ದೇಶಿತ ಕಾರ್ಯಕ್ರಮ ನಡೆಸುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಉಪರಾಷ್ಟ್ರಪತಿ ಆಗಮಿಸುತ್ತಿದ್ದಾರೆ ಎಂಬ ಕಾರಣಕ್ಕೆ ಅರಣ್ಯ ನಾಶ ಮತ್ತು ನಿರ್ಮಾಣ ಕಾಮಗಾರಿಗೆ ಅವಕಾಶ ಇರಬಾರದು. ಪ್ರತಿವಾದಿಗಳು ಉಪರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ ಹೆಸರು ಬಳಕೆ ಮಾಡಿಕೊಂಡು ತಮ್ಮ ಬಳಿ ಇರುವ ರಾಜಕೀಯ ಪ್ರಭಾವವನ್ನು ತೋರಿಸುತ್ತಿದ್ದಾರೆ. ಹೀಗಾಗಿ, ಅವರು ಅರಣ್ಯದಲ್ಲಿ ರಸ್ತೆ ನಿರ್ಮಾಣ ಇತ್ಯಾದಿ ಚಟುವಟಿಕೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಾವಿರಾರು ಕಾರುಗಳು ಅಲ್ಲಿ ಓಡಾಡಬಹುದಾಗಿದೆ. ವಾಸ್ತವದಲ್ಲಿ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಬಾರದಿತ್ತು. ಈ ಕಾಡಿನ ಮಧ್ಯದಲ್ಲಿ ನಿರ್ಮಾಣ ಕಾಮಗಾರಿಗೆ ಮೊದಲನೆಯದಾಗಿ ಅನುಮತಿ ನೀಡಬಾರದಿತ್ತು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರಾದ ಎಂ. ಶಿವಕುಮಾರ್ ಅವರು ಈಶಾ ಯೋಗ ಕೇಂದ್ರವು ಅರಣ್ಯಕ್ಕೆ ಅಪಾರ ಹಾನಿ ಮಾಡಿದೆ. ಕ್ಷಮಿಸಲಾರದ ಪಾಪ ಕೃತ್ಯವನ್ನು ಅವರು ಎಸಗಿದ್ದಾರೆ ಎಂದು ಆಕ್ಷೇಪಿಸಿದರು. ಅಲ್ಲದೆ, ಕಾರ್ಯಕ್ರಮದ ಹೆಸರಿನಲ್ಲಿ ಪಟಾಕಿ ಸಿಡಿಸುವುರು, ಬೆಂಕಿ ಹಾಕುವ ಕಾರ್ಯಗಳು ನಡೆಯುವ ಸಾಧ್ಯತೆಯಿದೆ ಎಂದರು. ಇದನ್ನು ಆಕ್ಷೇಪಿಸಿದ ಪೀಠ, ಉಪರಾಷ್ಟ್ರಪತಿ ಆಗಮಿಸುತ್ತಿರುವುದರಿಂದ ಆ ರೀತಿಯ ಘಟನೆಗಳು ನಡೆಯುವ ಸಾಧ್ಯತೆಯಿಲ್ಲ ಎಂದು ಅಭಿಪ್ರಾಯಪಟ್ಟು ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಜಾಗದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚನೆ

Last Updated : Jan 13, 2023, 3:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.