ETV Bharat / state

JMFC ಕೋರ್ಟ್​​​ಗಳಲ್ಲಿ ಬಾಕಿಯಿರುವ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಕೇಸ್​​ನ ಮಾಹಿತಿ ಕೇಳಿದ ಹೈಕೋರ್ಟ್

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ಹೈಕೋರ್ಟ್​​ ಅಭಿಪ್ರಾಯಪಟ್ಟಿದೆ..

high court
ಹೈಕೋರ್ಟ್
author img

By

Published : Jun 22, 2021, 4:50 PM IST

ಬೆಂಗಳೂರು : ಶಾಸಕರು, ಸಂಸದರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳಲ್ಲಿ ಎಷ್ಟು ಪ್ರಕರಣಗಳು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಕೋರ್ಟ್(ಜೆಎಂಎಫ್​ಸಿ)ಗಳಲ್ಲಿ ಬಾಕಿ ಇವೆ ಎಂಬುದರ ಕುರಿತಂತೆ ಅಂಕಿ-ಅಂಶಗಳುಳ್ಳ ಮಾಹಿತಿ ಸಲ್ಲಿಸಲು ಹೈಕೋರ್ಟ್ ತನ್ನ ರಿಜಿಸ್ಟ್ರಾರ್​​ ಜನರಲ್​ಗೆ ನಿರ್ದೇಶಿಸಿದೆ.

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವ ಸಂಬಂಧ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಪ್ರಕರಣದಲ್ಲಿ ಅಮೈಕಸ್ ಕ್ಯೂರಿ ಆಗಿರುವ ಹಿರಿಯ ವಕೀಲರಾದ ಆದಿತ್ಯ ಸೋಂಧಿ ಜನಪ್ರತಿನಿಧಿಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಎದುರಾಗಿರುವ ತಾಂತ್ರಿಕ ಸಮಸ್ಯೆಯನ್ನು ಪ್ರಸ್ತಾಪಿಸಿದರು.

ಇದನ್ನೂ ಓದಿ: EXCLUSIVE- ಕಾಲೇಜ್​ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಡ್ರೈವ್: ಸ್ನಾತಕೋತ್ತರ ಕಾಲೇಜು ಆರಂಭಕ್ಕೆ ಸಿದ್ಧವಾಯ್ತು ಪ್ಲಾನ್

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ, ಜೆಎಂಎಫ್​ಸಿ ಕೋರ್ಟ್​​ಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಅಂಕಿ-ಅಂಶಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿತು.

ಹೈಕೋರ್ಟ್ ಕೇಳಿರುವ ಮಾಹಿತಿ :

  • ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ.
  • ಜನಪ್ರತಿನಿಧಿಗಳು ದಾಖಲಿಸಿರುವ ಪ್ರಕರಣಗಳ ಸಂಖ್ಯೆ.
  • ಜೆಎಂಎಫ್‌ಸಿ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ.
  • ಪ್ರಕರಣಗಳು ವಿಚಾರಣೆಯಾಗುತ್ತಿರುವ ಹಂತ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.