ಬೆಂಗಳೂರು : ಹಾಲಿ ಮತ್ತು ಮಾಜಿ ಶಾಸಕರು - ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯ ಸ್ಥಾಪಿಸುವ ಕುರಿತು ಸರ್ಕಾರ ತನ್ನ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚಿಸಿದೆ.
ಇದೇ ವೇಳೆ ವಿಶೇಷ ನ್ಯಾಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ಗಳ ಅವಶ್ಯಕತೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವವರ ಸಂಖ್ಯೆ ಹಾಗೂ ಅವರ ಅರ್ಹತೆ ಮತ್ತು ನೇಮಕಗೊಳಿಸುವ ಪ್ರಕ್ರಿಯೆ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ನೀಡಿರುವ ಸೂಚನೆ ಮೇರೆಗೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅಮಿಕಸ್ ಕ್ಯೂರಿ ಆಗಿರುವ ಹಿರಿಯ ವಕೀಲ ಆದಿತ್ಯ ಸ್ವಾಮಿ ಅವರು ಪೀಠಕ್ಕೆ ಮಾಹಿತಿ ನೀಡಿ, ಜನಪ್ರತಿನಿಧಿಗಳು ದಾಖಲಿಸಿರುವ ಅಥವಾ ದೂರು ನೀಡಿರುವ ಪ್ರಕರಣಗಳನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂಬ ವಿಚಾರವನ್ನು ಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಸುಪ್ರೀಂಕೋರ್ಟ್ ಎದುರು ಇದೇ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ಬಾಕಿ ಇದ್ದು, ಈ ವಿಚಾರವನ್ನು ಅಲ್ಲಿಯ ನಿರ್ಧರಿಸಲಾಗುತ್ತದೆ. ಆದ್ದರಿಂದ ಈ ವಿಷಯವನ್ನು ಸುಪ್ರೀಂಕೋರ್ಟ್ ಅಮಿಕಸ್ ಕ್ಯೂರಿ ಅವರಿಗೆ ತಿಳಿಸುವಂತೆ ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿತು.
ಜನಪ್ರತಿನಿಧಿಗಳ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ : ಸರ್ಕಾರದ ನಿಲುವು ಕೇಳಿದ ಹೈಕೋರ್ಟ್ - ಬೆಂಗಳೂರು ಹೈ ಕೋರ್ಟ್